Yuvavahini

MAY 16, 2022 1.43 PM IST

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ಕುಟುಂಬ ಸಮ್ಮಿಲನ-2022

ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಎಲ್ಲ ಸದಸ್ಯರುಗಳು ಭಾಗವಹಿಸಿದ್ದರು. ಮಕ್ಕಳಿಗೆ, ಮಹಿಳೆಯರಿಗೆ ಹಾಗು ಪುರುಷರಿಗೆ ಮತ್ತು ಹಿರಿಯ ಸದಸ್ಯರುಗಳಿಗೆ ಬೇರೆ ಬೇರೆ ವಿಭಾಗದ ಆಟೋಟ ಸ್ಪರ್ಧೆಗಳನ್ನು ಬೆಳಗಿನಿಂದ ಸಂಜೆಯವರೆಗೆ ಏರ್ಪಡಿಸಲಾಗಿತ್ತು. ಮಹಿಳಾ ಸದಸ್ಯರುಗಳು ಹಾಗೂ ಮಕ್ಕಳು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಕ್ರೀಡಾ ನಿರ್ದೇಶಕರಾದ ಶ್ರೀ ಯಶವಂತ್, ಕ್ರೀಡಾ ಸಂಚಾಲಕರಾಗಿ ಸಂದೀಪ್ ಕೋಟ್ಯಾನ್, ದೇಜಪ್ಪ ಬಂಗೇರ ಮತ್ತು ಶೋಭಾ ದಿವಾಕರ್ ರವರು ಸಹಕಾರ ನೀಡಿದರು. ಘಟಕದ ಮಾಜಿ ಅಧ್ಯಕ್ಷರುಗಳಾದ ಸಂಜೀವ ಸುವರ್ಣ ಹಾಗೂ ಸುರೇಶ್ ಪೂಜಾರಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಂಜೆ 6:00 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿಯವರು ಸರ್ವರಿಗೆ ಧನ್ಯವಾದ ಅರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!