ದಿನಾಂಕ ಏಪ್ರಿಲ್ 30 ರಂದು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಪಡುಬಿದ್ರಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿತು. ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ರವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಲೇರಿ ವಹಿಸಿದ್ದರು.
ತರಬೇತುದಾರರಾಗಿ ಸಿಡೋಕ್ ಮಂಗಳೂರಿನ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್, ಉದ್ಯಮಶೀಲತಾ ತರಬೇತುದಾರರಾದ ಮೋಹನಾಂಗಯ್ಯ ಸ್ವಾಮಿ ಹಾಗೂ ಹಿರಿಯ ಸಮಾಲೋಚಕರಾದ ಅಶೋಕ್ ಶೆಟ್ಟಿ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕರಾದ ರೇಖಾ ಗೋಪಾಲ್, ಸಮಾಜಸೇವಕರಾದ ಉಮಾನಾಥ್ ಕೋಟ್ಯಾನ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲ, ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಯಶೋದ, ಘಟಕದ ಕಾರ್ಯದರ್ಶಿ ವಿಧಿತ್, ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಸುಮಾರು 30ಕ್ಕೂ ಅಧಿಕ ಶಿಬಿರಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ನಿರೂಪಿಸಿ, ಪಡುಬಿದ್ರಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಯಶೋದ ಸ್ವಾಗತಿಸಿ,
ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸುಜಾತ ಪ್ರಸಾದ್ ವಂದಿಸಿದರು.