Yuvavahini

JUN 19, 2022 3.29 PM IST

ಯುವವಾಹಿನಿ (ರಿ.) ಕಂಕನಾಡಿ ಘಟಕ

ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ : ಮಟ್ಟು

ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ ಉದ್ಘಾಟನೆಯನ್ನು ಉಜ್ಜೋಡಿ ಹೌಸ್ ನ  ಲಕ್ಷ್ಮೀ ಮಾರಪ್ಪನವರು ದೀಪ ಬೆಳಗಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ನಯನ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ  ರವಿ ಕೊಂಡಾಣ, ಕಟ್ಟಡದ ಮಾಲೀಕರಾದ ಸುರೇಶ್ ಉಜ್ಜೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಮಾರಂಭದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಉಜ್ಜೋಡಿ ಶ್ರೀ ಮಹಾಂಕಾಳಿ ಸೇವಾ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲಿನ ಪದಾಧಿಕಾರಿಗಳು, ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಂಕನಾಡಿ ಗರೋಡಿ ಬಿಲ್ಲವ ಸೇವಾ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಕನಕರ ಬೆಟ್ಟು ಗರೋಡಿ ಕ್ಷೇತ್ರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು. ಮಂಗಳೂರು ಘಟಕದ ಸದಸ್ಯರು ರಸಮಂಜರಿ ಕಾರ್ಯಕ್ರಮ ನೀಡಿ ಅಭಿನಂದಿಸಿದರು. ಘಟಕದ ಅಧ್ಯಕ್ಷರಾದ ನಯನ ಸುರೇಶ್ ಎಲ್ಲರನ್ನೂ ಸ್ವಾಗತಿಸಿದರು. ರಚನ ಶೇಖರ್ ಪ್ರಾರ್ಥಿಸಿದರು.  ಮೇಘ ಹಾಗೂ ದೇವಕಿ ಕಿಶೋರ್ ಕಾರ್ಯಕ್ರಮ ನಿರೂಪಿಸಿದರು. ಘಟಕದ ಕಾರ್ಯದರ್ಶಿ  ಲೋಕೇಶ್ ಅಮೀನ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!