ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ ಅತಿಥಿ ಅಭ್ಯಾಗತರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಅರವಿಂದ ಡಿ ಬಾಲೇರಿಯವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರಕಾರವು ಜೀವನೋಪಾಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿ, ಕಾರ್ಯಕ್ರಮವನ್ನು ಆಯೋಜಿಸಿರುವ ಘಟಕಗಳಿಗೆ ಅಭಿನಂದನೆ ಸಲ್ಲಿಸಿದರು. ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲಕೃಷ್ಣರವರು ಪ್ರಾಸ್ತಾವಿಕ ಮಾತನಾಡಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಮಂಗಳೂರು ಘಟಕ ಮತ್ತು ಮಹಿಳಾ ಘಟಕವನ್ನು ಅಭಿನಂದಿಸುತ್ತಾ , ಮುಂದಿನ ದಿನಗಳಲ್ಲಿ ಶಿಬಿರಾರ್ಥಿಗಳು ಸ್ವ ಉದ್ಯೋಗ ನಡೆಸಲು ಈ ಕಾರ್ಯಕ್ರಮವು ಉತ್ತಮ ಪ್ರೇರಣೆಯಾಗಲಿಯೆಂದರು. ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಹಾಗೂ ಉದ್ಯಮಶೀಲತಾ ತರಬೇತುದಾರರಾದ ರೇಖಾ ಗೋಪಾಲ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳು ಹಾಗೂ ತರಬೇತುದಾರರಾದ ಸತೀಶ್ ಮಾಬೇನ್, ಮೋಹನಾಂಗಯ್ಯ ಸ್ವಾಮಿ ಸತೀಶ್ ಅತ್ತಾವರ ಸರಕಾರದಿಂದ ದೊರೆಯುವ ಸವಲತ್ತುಗಳು, ಸರಕಾರದ ಯೋಜನೆಗಳು, ಕಾರ್ಯನಿರ್ವಹಿಸುವ ಕ್ರಮಗಳು, ಬ್ಯಾಂಕಿನಿಂದ ದೊರೆಯುವ ಸಾಲ ಸೌಲಭ್ಯಗಳು ಹಾಗೂ ಸಬ್ಸಿಡಿಗಳ ಬಗ್ಗೆ ವಿವರವಾದ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಮಂಗಳೂರು ಘಟಕದ ಕಾರ್ಯದರ್ಶಿ ಅಶೋಕ್ ಅಂಚನ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಿಡಾಕ್ ನ ಜಿಲ್ಲಾ ಸಂಯೋಜಕರಾದ ಕುಮಾರಿ ಪ್ರವಿಶ್ಯರವರು ಕಾರ್ಯಕ್ರಮವನ್ನು ಆಯೋಜಿಸಿದರು. ವಿದ್ಯಾರವರು ಶಿಬಿರಾರ್ಥಿಗಳ ನೊಂದಣಿ ಮಾಡಿದರು. ಮಹಿಳಾ ಘಟಕದ ಕಾರ್ಯದರ್ಶಿಯವರಾದ ಸುಭಾಷಿಣಿಯವರು ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿದರು. 56 ಜನ ಶಿಬಿರಾರ್ಥಿಗಳು ಉದ್ಯಮಶೀಲತೆ ತಿಳುವಳಿಕೆ ಕಾರ್ಯಕ್ರಮದ ಪ್ರಯೋಜನವನ್ನು ಪಡಕೊಂಡರು. ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣ್ ರವರು ಕಾರ್ಯಕ್ರಮದ ಅನುಕೂಲತೆಗಳ ವಿವರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಸರ್ವರಿಗೂ ವಂದನಾರ್ಪಣೆಯನ್ನು ಸಲ್ಲಿಸಿದರು.