Yuvavahini

JUL 10, 2022 8.54 AM IST

ಯುವವಾಹಿನಿ ಬಂಟ್ವಾಳ ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭ

ಯುವವಾಹಿನಿ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ : ಉದಯ ಅಮೀನ್ ಮಟ್ಟು

 ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿಗಳಾದ ಜಗದೀಪ್ ಡಿ.ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ, ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ ಹಾಗೂ ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳ 21 ಸದಸ್ಯರ ನೂತನ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್ ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಯುವವಾಹಿನಿ ಕುಟುಂಬ ಸದಸ್ಯರಾದ ನಮನ್ ಎಮ್ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾಗೇಶ್ ಎಮ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷರಾದ ಇಂದಿರೇಶ್ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರರಾದ ಪದ್ಮರಾಜ್ ಆರ್ ಹಾಗೂ ಯುವವಾಹಿನಿಯ ವಿವಿಧ ಘಟಕಗಳ ಪದಾಧಿಕಾರಿಗಳು ನೂತನ ತಂಡಕ್ಕೆ ಶುಭ ಹಾರೈಕೆ ಮಾಡಿದರು. ಘಟಕಕ್ಕೆ ಸೇರ್ಪಡೆಯಾದ ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಸರ್ವರ ಸಹಕಾರದೊಂದಿಗೆ ಮುಂದಿನ ಸಾಲಿನಲ್ಲಿ ಯುವವಾಹಿನಿ ಬಂಟ್ವಾಳ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸ ತನ್ನಲ್ಲಿದೆ ಎಂದು 2022-23 ನೇ ಸಾಲಿನ‌ ಯುವವಾಹಿನಿ ಬಂಟ್ವಾಳ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಸಂಘಟನಾ ಕಾರ್ಯದರ್ಶಿ ಶಿವಾನಂದ ಎಮ್ ಹಾಗೂ ನೂತನ ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು ನಾಗೇಶ್ ಏಲಾಬೆ ಸ್ವಾಗತಿಸಿದರು, ಹರೀಶ್ ಕೋಟ್ಯಾನ್ ಕುದನೆ ಪ್ರಸ್ತಾವನೆ ಮಾಡಿದರು. ಲೋಹಿತ್ ಕನಪಾದೆ ಧನ್ಯವಾದ ನೀಡಿದರು, ಯತೀಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!