Yuvavahini

JUL 09, 2022 4.17 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಬೆಳ್ಳಿ ಬೆಳಕು – 2022, 25ರ ಸಂಭ್ರಮ

ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ ಸ್ಮರಣಾರ್ಥ ಅವರ ಧರ್ಮಪತ್ನಿಯಾದ ವಸುಮತಿ ಅನಂತರಾಮರವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅವರ ಮಕ್ಕಳಾದ ಕು| ವೈಷ್ಣವಿ ಹಾಗೂ ಅಭಿನಂದನ್ ಉಪಸ್ಥಿತರಿದ್ದರು.
ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಲಸೆ, ಮಾಜಿ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ,ಕಾರ್ಯದರ್ಶಿ ಉದಯ್ ಪೂಜಾರಿ,ಜೊತೆ ಕಾರ್ಯದರ್ಶಿಅನಿತಾ ಸತೀಶ್ , ಪದಾಧಿಕಾರಿಗಳಾದ ನಾಣ್ಯಪ್ಪ ಕೋಟ್ಯಾನ್,ಮಾಧವ್ ಬಿ.ಕೆ, ಮನೋಹರ್ ಕರುವೇಲ್, ತುಳಸಿದರ್ ಬೆನೆಪ್ಪು ಹಾಗೂ ಸದಸ್ಯರಾದ ರಕ್ಷಿತ್ ಸುಣ್ಣನ,ವೀರೇಶ್ ಕಳೆಂಜ,ರಕ್ಷಿತ್ ಪಾಳೆತ್ತಡಿ, ಸತೀಶ್, ಕು| ಅಕ್ರತಿ, ಕು| ವರ್ಷ, ಕು| ಮೇಷ , ಕು| ಸಾನ್ವಿ , ಸಾತ್ವಿಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.. ಡೆಂಬಲೆ ಮನೆತನದ ಪರವಾಗಿ ಮೋನಪ್ಪ ಪೂಜಾರಿ ಉಪ್ಪಿನಂಗಡಿ ಘಟಕದ ಈ ಕಾರ್ಯಕ್ರಮಕ್ಕೆ ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!