Yuvavahini

JUL 17, 2022 4.25 PM IST

ಯುವ ಸಮ್ಮಿಲನ ಕಾರ್ಯಕ್ರಮ

ಕಾರ್ಕಳ:- ದಿನಾಂಕ 17 ಜುಲೈ 2022ನೇ ಆದಿತ್ಯವಾರ ಯುವವಾಹಿನಿ(ರಿ.) ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಜಂಟಿ ಆಶ್ರಯದಲ್ಲಿ “ಯುವ ಸಮ್ಮಿಲನ ಕಾರ್ಯಕ್ರಮ ” ಆನೆಕೆರೆ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾರ್ಕಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಉದ್ಯಮಿಗಳಾಗಿರುವ ಡಿ. ಆರ್. ರಾಜು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಘಟಕದ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು , ಉದ್ಯಮಿ ನವೀನ್ ಅಮೀನ್, ಹಾಗೂ ಮೂಡಬಿದ್ರಿ ಘಟಕದ ಅಧ್ಯಕ್ಷರಾದ ನವಾನಂದ್, ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಮಾಜಿಕ, ಧಾರ್ಮಿಕ, ರಾಜಕೀಯ ಹಾಗೂ ಶೈಕ್ಷಣಿಕ ಮತ್ತು ಕಲಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷರಾಗಿರುವ ಚಂದ್ರಹಾಸ ಸುವರ್ಣ ಕಾರ್ಕಳ, ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು, ಕುಣಿತ ಭಜನೆಯ ತರಬೇತುದಾರರಾಗಿ ಕಾರ್ಕಳದಾದ್ಯoತ ಕುಣಿತ ಭಜನಾ ಮಂಡಳಿಗಳಿಗೆ ತರಬೇತಿ ನೀಡುವುದರ ಜೊತೆಗೆ ಶ್ರೀ ಮಂಜುನಾಥಶ್ವರ ಭಜನಾ ಪರಿಷತ್ ಕಾರ್ಕಳ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸ ಪೂಜಾರಿ ಎರ್ಲಪ್ಪಾಡಿ ಹಾಗೂ ಯಶಸ್ವೀ ಉದ್ಯಮಿ, ಸಾಮಾಜ ಸೇವಕರೂ ಆಗಿರುವ ನವೀನ್ ಅಮೀನ್ ಉಡುಪಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು, ರಶ್ಮಿ ಪ್ರಾರ್ಥಿಸಿದರು, ಕಾರ್ಕಳ ಘಟಕದ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು, ಕಾರ್ಕಳ ಘಟಕದ ಪೂರ್ವಧ್ಯಕ್ಷರಾದ ಗಣೇಶ್ ಸಾಲಿಯಾನ್, ಉಪಾಧ್ಯಕ್ಷರಾಗಿರುವ ಪ್ರಕಾಶ್ ಪೂಜಾರಿ ಕೆರ್ವಾಶೆ, ಸಮಾಜಸೇವಾ ನಿರ್ದೇಶಕರಾದ ಸಂದೇಶ್ ಕೋಟ್ಯಾನ್ ಸನ್ಮಾನ ಪತ್ರ ವಾಚಿಸಿದರು,ವಿದ್ಯಾರ್ಥಿ ಸಂಘಟನೆಯ ನಿರ್ದೇಶಕರಾಗಿರುವ ರತ್ನಾಕರ್ ಪೂಜಾರಿ ವರಂಗ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಮತಾ ಅಂಚನ್ ವಂದನಾರ್ಪಣೆಗೈದರು, ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಕಾರ್ಕಳ, ಮೂಡಬಿದ್ರಿ, ಉಡುಪಿ ಘಟಕಗಳ ಪದಾಧಿಕಾರಿ, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!