ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನ ಇದರ ಸಹಕಾರದೊಂದಿಗೆ ತಾರೀಕು 5 ಆಗಸ್ಟ್ 2022 ಶುಕ್ರವಾರದಂದು ಶ್ರೀ ವರಮಹಾಲಕ್ಷ್ಮಿ ಪೂಜೆಯು ಭಜನೆ, ಶ್ರೀ ಲಕ್ಷ್ಮೀ ಅಷ್ಟೋತ್ತರ, ಶ್ರೀ ಲಲಿತಾ ಸಹಸ್ರ ನಾಮ ಪಠನದೊಂದಿಗೆ ನಡೆಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು, ಮಂಗಳೂರು ಘಟಕದ ಅಧ್ಯಕ್ಷರು, ಕಂಕನಾಡಿ ಘಟಕದ ಸರ್ವ ಸದಸ್ಯರು ಹಾಗೂ ಸುಮಾರು 500ಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಂಡು ಶ್ರೀ ವರಮಹಾಲಕ್ಷ್ಮೀ ಮಾತೆಯ ಪ್ರಸಾದ ಸ್ವೀಕರಿಸಿದರು ಹಾಗೂ ಪೂಜೆಯು ನಂತರ ಎಲ್ಲರಿಗೂ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.