Yuvavahini

AUG 10, 2022 1.50 PM IST

ಯುವವಾಹಿನಿ (ರಿ.) ಬಂಟ್ವಾಳ ಘಟಕ

ಆರೋಗ್ಯ ಮಾನವನ ಶ್ರೇಷ್ಠ ಸಂಪತ್ತು : ಪಲ್ಲವಿ ಕಾರಂತ್

ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಆಶ್ರಯದಲ್ಲಿ ಯೆನಪೊಯ ಆಯುರ್ವೇದ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ಉಚಿತ ಆಯುರ್ವೇದ ಆರೋಗ್ಯ ಹಾಗೂ ಕಣ್ಣು ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.

ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯೆನಪೊಯ ಆಯುರ್ವೇದ ವೈದ್ಯಕೀಯ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಲಕ್ಷ್ಮೀಶ ಉಪಾಧ್ಯಾಯ ಹಾಗೂ ಶಿಬಿರದ ಕಾರ್ಡಿನೇಟರ್ ಅಬ್ದುಲ್ ರಝಾಕ್ ಶಿಬಿರದ ಮಹತ್ವ ತಿಳಿಸಿದರು, ಓಂ‌ ಫ್ರೇಂಡ್ಸ್ ಪಚ್ಚಿನಡ್ಕದ ಸ್ಥಾಪಕ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ರಜತ ವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಶಿಬಿರದಲ್ಲಿ ಒಟ್ಟು 150 ಶಿಬಿರಾರ್ಥಿಗಳು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಪೂಜಾರಿ, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ರಾಮಚಂದ್ರ ಸುವರ್ಣ, ಪ್ರೇಮನಾಥ್ ಕೆ, ಯೋಗೀಶ್ ಪೂಜಾರಿ ಮೆಸ್ಕಾಂ, ಕಿರಣ್‌ರಾಜ್ ಪೂಂಜರೆಕೋಡಿ, ಹರಿಣಾಕ್ಷಿ, ನಿಕೇಶ್ ಕೋಟ್ಯಾನ್ ರೋಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಮಾಜಿ ಅದ್ಯಕ್ಷ ಸತೀಶ್ , ಪದ್ಮನಾಭ ರೈ ಮತ್ತಿತರರು ಉಪಸ್ಥಿತರಿದ್ದರು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ರಾಜೇಶ್ ಸುವರ್ಣ ಸ್ವಾಗತಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ ಪಡು ವಂದಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!