ಬಂಟ್ಬಾಳ : ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದ ಮೂಲಕ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಯುವವಾಹಿನಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ತಿಳಿಸಿದರು
ಅವರು ಯುವವಾಹಿನಿ ಬಂಟ್ವಾಳ ಘಟಕದಿಂದ ದಿನಾಂಕ 15.08.2022 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದ ಆವರಣದಲ್ಲಿ ನಡೆದ ದ್ವಜಾರೋಹಣ ಸಮಾರಂಭದಲ್ಲಿ ಶುಭ ಸಂದೇಶ ನೀಡಿದರು. ಯುವವಾಹಿನಿ ಬಂಟ್ವಾಳ ಘಟಕದ ಸಲಹೆಗಾರ ಅಣ್ಣು ಪೂಜಾರಿ ದ್ವಜಾರೋಹಣ ಮಾಡಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಕೋಶಾಧಿಕಾರಿ ಉಮೇಶ್ ಸುವರ್ಣ ತುಂಬೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಾಧ್ಯಕ್ಷ ದಿನೇಶ್ ಸುವರ್ಣ ರಾಯಿ, ಹರೀಶ್ ಕೋಟ್ಯಾನ್ ಕುದನೆ, ಕೋಶಾಧಿಕಾರಿ ಧನುಷ್ ಮದ್ವ, ಕಾರ್ಯದರ್ಶಿ ನಾಗೇಶ್ ಪೂಜಾರಿ ನೈಬೇಲು, ಜತೆ ಕಾರ್ಯದರ್ಶಿ ಲೋಹಿತ್ ಕನಪಾದೆ, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.