ಕಂಕನಾಡಿ :- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯನ್ನು ಘಟಕದ ಸದಸ್ಯರು ದಿನಾಂಕ 15 ಆಗಸ್ಟ್ 2022ರಂದು ಕಿಟ್ಟೆಲ್ ಮೆಮೋರಿಯಲ್ ಶಾಲೆಯ ಧ್ವಜಾರೋಹಣದಲ್ಲಿ ಪಾಲ್ಗೊಳ್ಳುವ ಮೂಲಕ ಆಚರಿಸಲಾಯಿತು.ಅಶೋಕ್ ಶಾಲೆಯ ಮಕ್ಕಳ ಸಮವಸ್ತ್ರಕ್ಕಾಗಿ ರೂಪಾಯಿ 5000/- ಸಹಾಯ ಧನ ಹಾಗೂ ಮಕ್ಕಳಿಗೆ ಸಿಹಿತಿಂಡಿ ಹಂಚುವ ಮೂಲಕ ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ನಯನ ಸುರೇಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.