ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು.
ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ದಿನಾಂಕ 21 ಆಗಸ್ಟ್ 2022ರ ಭಾನುವಾರ ನಡೆದ ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ -2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವುಗಳು ಸಹಜ. ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಗೆಲುವಿನ ಮೆಟ್ಟಿಲು ಹತ್ತಿರವಾಗುತ್ತದೆ ಎಂದರು. ಉಡುಪಿ ಘಟಕದ ಅಧ್ಯಕ್ಷ ಪ್ರವೀಣ್ ಡಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ , ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ , ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ ಎನ್ ಶಂಕರ ಪೂಜಾರಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿ , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ, ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ , ಕಾರ್ಯಕ್ರಮ ಸಂಚಾಲಕರಾದ ಮಹಾಬಲ ಅಮೀನ್, ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ಮೊದಲು ಧ್ವಜಾರೋಹಣವನ್ನು ಉದಯ ಅಮೀನ್ ಮಟ್ಟು ನೆರವೇರಿಸಿದರು. ಇದೇ ವೇಳೆ ಇತ್ತೀಚೆಗೆ ನಮ್ಮನ್ನಗಲಿದ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಸಚಿವ ಸುನೀಲ್ ಕುಮಾರ್ ಮತ್ತಿತರ ಗಣ್ಯರು ಪುಷ್ಪಾರ್ಚನೆಗೈದರು. ಈ ಸಂದರ್ಭದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ವಿಜೇತರಾದ ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ , ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕ ಜಗದೀಶ್ ಸ್ವಾಗತಿಸಿದರು , ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ್ ಅಮೀನ್ ಮಟ್ಟು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕದ ಕಾರ್ಯದರ್ಶಿ ದಯಾನಂದ ಕರ್ಕೆರ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.
Very nice program