Yuvavahini

AUG 21, 2022 3.19 PM IST

ಯುವವಾಹಿನಿ ಸಾಂಸ್ಕೃತಿಕ ಸೌರಭ ಡೆನ್ನಾನ ಡೆನ್ನನ - 2022

ಡೆನ್ನಾನ ಡೆನ್ನನ – 2022 ಚಾಂಪಿಯನ್ ಮುಡಿಗೇರಿಸಿದ ಯುವವಾಹಿನಿ ಬೆಳ್ತಂಗಡಿ ಘಟಕ

ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆಯಲ್ಲಿ ತೀರ್ಪುಗಾರರ ಮೆಚ್ಚುಗೆ ಗಳಿಸಿ ಪ್ರಥಮ ಬಹುಮಾನ ಹಾಗೂ ವೈಯಕ್ತಿಕ ಬಹುಮಾನಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಪಡೆಯಿತು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ಘಟಕವು ಪ್ರಶಸ್ತಿ ಫಲಕ ಹಾಗೂ ರೂ 25000/- ನಗದು ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆಗಾಗಿ ಎರಡು ಮಂದಿ ಸದಸ್ಯರು ಬಹುಮಾನಕ್ಕೆ ಭಾಜನರಾದರು. ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಪ್ರಶಸ್ತಿ ಫಲಕ ಹಾಗೂ ನಗದನ್ನು ಬೆಳ್ತಂಗಡಿ ಘಟಕದ ಸದಸ್ಯರಿಗೆ ಹಸ್ತಾಂತರಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ನಾರಾಯಣಗುರು ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲೆಯ ಬಿಲ್ಲವ ಪರಿಷತ್‌ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳ್, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕ‌ರ ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಕಾರ್ಯಕ್ರಮ, ಮಹಾಬಲ ಅಮೀನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ. ಪೂಜಾರಿ ಸ್ವಾಗತಿಸಿದರು. ಮಾಣಿ ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರು ಮತ್ತು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!