ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಭಾರತದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ಕೊಡುವ ಉದೇಶದೊಂದಿಗೆ ಕ್ರೀಡಾ ನಿರ್ದೇಶಕರ ಸಂಚಾಲಕತ್ವದಲ್ಲಿ ದಿನಾಂಕ 15 ಆಗಸ್ಟ್ 2022 ಸೋಮವಾರದಂದು ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೋರುಗುಡ್ಡೆ, ಜೋಕಟ್ಟೆ ಇಲ್ಲಿ ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾ ರವರು ಎಲ್ಲರನ್ನೂ ಸ್ವಾಗತಿಸಿ, ಘಟಕದ ಸಮಾಜ ಮುಖಿ ಕೆಲಸವನ್ನು ಶ್ಲಾಘಿಸಿದರು. ಘಟಕದ ಕ್ರೀಡಾ ನಿರ್ದೇಶಕರಾದ ಪ್ರದೀಪ್ ಶಿಕ್ಷಕರು ಮಕ್ಕಳಿಗೆ ಕ್ರೀಡೆಗೆ ಹುರಿದುಂಬಿಸುವ ಕೆಲಸ ಮಾಡಬೇಕು. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡಾ ಸಮಾಗ್ರಿಗಳನ್ನು ಸಮರ್ಪಕವಾಗಿ ಬಳಸಬೇಕು ಎಂದು ಹೇಳಿದರು.
ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಮಾತನಾಡಿ ಯುವವಾಹಿನಿ (ರಿ.) ಕೂಳೂರು ಘಟಕವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದು ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾ ಸಾಮಾಗ್ರಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಮಾತನಾಡಿ ಈ ಬಾರಿ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತವು 4 ನೇ ಸ್ಥಾನ ಪಡೆದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಗ್ರಾಮೀಣ ಪ್ರದೇಶದ ಮಕ್ಕಳು ಕ್ರೀಡೆಗೆ ಹೆಚ್ಚು ಒಲವು ತೋರಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ನಯನ ರಮೇಶ್, ಎರಡನೇ ಉಪಾಧ್ಯಕ್ಷರಾದ ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಜತೆ ಕಾರ್ಯದರ್ಶಿ ತುಳಸಿ ಸುಜೀರ್ , ಪದಾಧಿಕಾರಿಗಳು, ಸದಸ್ಯರು ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.