Yuvavahini

AUG 15, 2022 3.30 PM IST

ಯುವವಾಹಿನಿ(ರಿ.) ಹೆಜಮಾಡಿ ಘಟಕ ಪದಗ್ರಹಣ ಕಾರ್ಯಕ್ರಮ

ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ ಪೂಜಾರಿ, ಬಿಲ್ಲವ ಪರಿಷತ್ (ರಿ.)ಉಡುಪಿಯ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಉಪಸ್ಥಿತರಿದ್ದರು. ಹಾಗೂ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಧೀರಜ್ ಮತ್ತು ನಮ್ಮ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ ಅನಿಲ್ ಉಪಸ್ಥಿತರಿದ್ದರು.

ವಿದ್ಯೆ ಉದ್ಯೋಗ ಸಂಪರ್ಕದ ನೆಲೆಯಲ್ಲಿ ಹೆಜಮಾಡಿ ಗ್ರಾಮದ 7 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎ ಎಸ್ ಐ ಗೋಪಾಲಕೃಷ್ಣ ಕುಂದರ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು ಹಾಗೂ ಊರಿನ ವೀರಯೋಧ ನಾರಾಯಣ ಕರ್ಕೇರರವರು ಮಿಲಿಟರಿಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು ಮತ್ತು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರನ್ನು ಸನ್ಮಾನಿಸಲಾಯಿತು. 2021-22 ರಲ್ಲಿ ಕಾರ್ಯನಿರ್ವಹಿಸಿದ ರಾಜೇಶ್ ಸನಿಲ್ ಹಾಗೂ ತಂಡಕ್ಕೆ ಅಭಿನಂದನೆ ಸಲ್ಲಿಸಿ 2022-23 ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಧನಂಜಯ ಪೂಜಾರಿ ಹಾಗೂ ತಂಡಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ಸ್ವಾಗತಿಸಿ, ಸುನೀತಾ ಕರ್ಕೇರ ನಿರೂಪಿಸಿ , ಜಯಶ್ರೀ ಸದಾಶಿವರವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!