Yuvavahini

SEP 04, 2022 2.25 PM IST

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ಬೆಳ್ಳಿ ಬೆಳಕು -2022, 25ರ ಸಂಭ್ರಮ

 

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ ಮುನ್ನಡೆಸಿದ ಸುನೀಲ್ ಕುಮಾರ್ ನಿವೇದಿತಾ ದಂಪತಿಗಳನ್ನು, ಸುನೀಲ್ ರವರ ಮಾತೃಶ್ರೀಯವರಾದ ಕುಸುಮಾವತಿ ಯವರೊಂದಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡುವುದರ ಮೂಲಕ ಗೌರವಿಸಲಾಯಿತು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಯವರು ಸಾಮಾಜಿಕ ಕಾರ್ಯಗಳಲ್ಲಿ ದಿವಂಗತ ದಡ್ಡು ಶೀನಪ್ಪ ಪೂಜಾರಿಯವರ ಕೊಡುಗೆಯನ್ನು ಸ್ಮರಿಸಿದರು. ಘಟಕದ ಅಧ್ಯಕ್ಷರಾದ ಕುಶಾಲಪ್ಪ ಹತ್ತು ಕಳಸೆ, ಮಾಜಿ ಅಧ್ಯಕ್ಷರುಗಳಾದ ಅಜಿತ್ ಕುಮಾರ್ ಪಾಲೇರಿ, ಚಂದ್ರಶೇಖರ್ ಸನಿಲ್, ಮಾಜಿ ಕಾರ್ಯದರ್ಶಿ ಅನಿಲ್ ಕುಮಾರ್, ಹಿರಿಯರಾದ ಬೊಮ್ಮಯ್ಯ ಬಂಗೇರ, ಪದಾಧಿಕಾರಿಗಳಾದ ಮಾಧವ್ ಬಿ.ಕೆ, ಅಂಕಿತ್ ಪೂಜಾರಿ, ಮನೋಹರ್ ಕರುವೇಲ್, ಬೆಳ್ಳಿಪ್ಪಾಡಿ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾದ ವಸಂತ್ ಪೂಜಾರಿ, ಘಟಕದ ಸದಸ್ಯರಾದ ಕಾವ್ಯ ಅನಿಲ್ ಕುಮಾರ್, ಕು.ವರ್ಷ, ಕು. ಮೇಷ, ಕು.ಹರ್ಷಿತಾ, ಕು. ಅಭಿಜ್ನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಶಾಲಪ್ಪ ಹತ್ತುಕಳಸೆ ಸ್ವಾಗತಿಸಿ, ಉಪಾಧ್ಯಕ್ಷರಾದ ಮನೋಜ್ ಸಾಲ್ಯಾನ್ ಧನ್ಯವಾದ ಸಮರ್ಪಿಸಿದರು. ಘಟಕದ ನಿಕಟಪೂರ್ವ ಕಾರ್ಯದರ್ಶಿ ನಾಣ್ಯಪ್ಪ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!