Yuvavahini

SEP 21, 2022 9.32 AM IST

ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ ಜಗತ್ತಿಗೆ ಬೆಳಕಾಗಿದ್ದಾರೆ. ನಾರಾಯಣಗುರು ಮತ್ತು ಭೂ ಮಸೂದೆ ಕಾನೂನು ಬರದಿದ್ದರೆ ನಾವೆಲ್ಲರೂ ಪ್ರಾಣಿಗಿಂತ ಕಡೆಯಾಗಿರುತ್ತಿದ್ದೆವು. ಮತಾಂತರವನ್ನು ತಡೆಗಟ್ಟಲು ಶ್ರಮಿಸಿದರು. ನಾರಾಯಣಗುರುಗಳನ್ನು ನಂಬುವ ಬಿಲ್ಲವ ಸಮಾಜ ರಾಜಕೀಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗುತ್ತಿದೆ. ಕೇವಲ ಸಣ್ಣ ವೃತ್ತಕ್ಕೆ ಅವರ ಹೆಸರನ್ನು ಸೀಮಿತವಾಗದೆ ಕೇಂದ್ರ, ರಾಜ್ಯಗಳ ವ್ಯವಸ್ಥೆಯ ಭಾಗವಾಗಿ ಅವರ ಹೆಸರು ಶಾಶ್ವತವಾಗಬೇಕು. ಬಿಲ್ಲವ ಸಮಾಜ ಶ್ರೀಮಂತ ವ್ಯವಸ್ಥೆ ಹೊಂದಿದ್ದು, ದೈವಾರಾಧನೆ, ಸಂಧಿ ಪಾಡ್ದನ, ನಾಥ ಪಂಥದಲ್ಲಿಯೂ ಬಿಲ್ಲವರ ಇತಿಹಾಸವಿದೆ. ತುಳುನಾಡಿನ ದೈವಾರಾಧನೆಯಲ್ಲಿ ಪ್ರಮುಖ ಪಾತ್ರ ಬಿಲ್ಲವರದ್ದು, ದೈವಾರಾಧನೆಯಲ್ಲಿ ವೈದಿಕ ಪದ್ಧತಿ ಇಲ್ಲ ಎಂದು ಶಂಭುಗ ಮಾಣಿಕ್ಯ ಬೀಡು, ಕನ್ನಡ ಚಿತ್ರೋದ್ಯಮದ ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ, ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇವರ ಜಂಟಿ ಆಶ್ರಯದಲ್ಲಿ 21 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರಗಿದ ಬ್ರಹ್ಮಶ್ರೀ ನಾರಾಯಣಗುರುಗಳ 94ನೇ ಪುಣ್ಯತಿಥಿಯಂದು ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರು ಎಂಬ ವಿಷಯದ ಉಪನ್ಯಾಸ ನೀಡಿ ಮಾತನಾಡಿದರು.
ಕಾರ್ಯಕ್ರಮವನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉದ್ಘಾಟಿಸಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸಂದರ್ಭೋಚಿತವಾಗಿ ಮಾತನಾಡಿದರು.
ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಕಾರ್ಯದರ್ಶಿ ಲಕ್ಷ್ಮಣ್ ಡಿ ಪೂಜಾರಿ, ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಕಾರ್ಯದರ್ಶಿ ಡಾ| ಐಶ್ವರ್ಯ, ಬಿಲ್ಲವ ಸಂಘದ ಪದಾಧಿಕಾರಿಗಳು, ದೈವಾರಾಧನೆಯ ಚಾಕರಿಯವರು, ಯುವವಾಹಿನಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಬ್ರಹ್ಮಶ್ರೀ ನಾರಾಯಣಗುರುಗಳ 94 ನೇ ಪುಣ್ಯ ತಿಥಿಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಜನೆ ಮತ್ತು ಮಹಾ ಮಂಗಳಾರತಿ ಸೇವೆಯೂ ಜರಗಿತು.
ನಾರಾಯಣಗುರು ಮಹಿಳಾ ಮಂಡಳಿಯ ಸದಸ್ಯೆಯರು ಪ್ರಾರ್ಥಿಸಿದರು. ಯುವವಾಹಿನಿ( ರಿ.)ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್ ಪೂಜಾರಿ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಯಶೋದ ಪ್ರಸ್ತಾವನೆಗೈದರು. ರವಿರಾಜ್ ಎನ್ ಕೋಟ್ಯಾನ್ ಮತ್ತು ಪೂರ್ಣಿಮ ವಿಧಿತ್ ಕಾರ್ಯಕ್ರಮ ನಿರೂಪಿಸಿದರು. ಪಡುಬಿದ್ರಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾದ ಸಂತೋಷ್ ಕರ್ನಿರೆ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!