Yuvavahini

OCT 09, 2022 7.50 AM IST

ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ''ಕೆಸರ್ ಡೊಂಜಿ ದಿನ''ಕೆಸರುಗದ್ದೆ ಕ್ರೀಡಾಕೂಟ

ಕೃಷಿ ಸಂಸ್ಕೃತಿಯಲ್ಲಿ ಯುವಸಮುದಾಯ ತೊಡಗಿಸಿಕೊಳ್ಳಬೇಕು:- ಸಚಿವ ಸುನೀಲ್ ಕುಮಾರ್ ಅಭಿಮತ

ಬೆಳ್ತಂಗಡಿ :- “ಕೆಸರುಗದ್ದೆ ಕ್ರೀಡಾಕೂಟ ಇಂದು ಜನಾಕರ್ಷಣೆ ಪಡೆಯುತ್ತಿದೆ. ಯಾವುದೇ ಒಂದು ಸಂಘಟನೆ ಬಲಪಡಿಸಲು ಈ ರೀತಿಯ ಕ್ರೀಡಾಕೂಟ ಅಗತ್ಯ. ಇಂತಹ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಬಿಲ್ಲವ ಸಮುದಾಯವನ್ನು ಒಟ್ಟುಗೂಡಿಸುವ ಕಾರ್ಯ ಯುವವಾಹಿನಿ ಸಂಘಟನೆಯಿಂದಾಗಲಿ” ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ ವೇಣೂರು ಮೂಡುಕೋಡಿ ಗ್ರಾಮದ ನೆಲ್ಲಿಗುಡ್ಡೆ ನೋನೊಟ್ಟು ಗದ್ದೆಯಲ್ಲಿ ಭಾನುವಾರ ನಡೆದ ”ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಕೆಸರಿನಲ್ಲಿನ ಕ್ರೀಡಾಕೂಟ ಕೇವಲ ಒಂದು ದಿನ ಒಂದು ವಾರಕ್ಕೆ ಸೀಮಿತವಾಗಬಹುದು. ಅದರ ಹಿಂದೆ ಕೃಷಿ ಚಟುವಟಿಕೆ ವಿಸ್ತಾರವಾಗಬೇಕು ಎಂಬ ಕಾಳಜಿ ಇದೆ. ನಾನಾ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬದುಕಿನ ಅರ್ಥವನ್ನೇ ಕಳೆದುಕೊಳ್ಳುವ ಬದಲು ಕೃಷಿ ಸಂಸ್ಕೃತಿಯಲ್ಲಿ ಯುವಕರು ತೊಡಗಿಸಿಕೊಂಡು ಅಭಿವೃದ್ಧಿಯನ್ನು ಕಾಣುವಂತಾಗಬೇಕು’ ಎಂದರು.


ಮಾಜಿ ಶಾಸಕ ಕೆ.ವಸಂತ ಬಂಗೇರ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕೆಸರುಗದ್ದೆ ಕ್ರೀಡಾಕೂಟ ಗ್ರಾಮೀಣ ಜನರಿಗೆ ತನ್ನನ್ನು ತಾನು ತೊಡಗಿಸಿಕೊಳ್ಳಲು ಉತ್ತಮ ಅವಕಾಶ. ಇದರಿಂದ ಗ್ರಾಮೀಣ ಪ್ರದೇಶದ ರೈತರ ಮಕ್ಕಳು ಸಂಘಟನೆಯನ್ನು ಅರ್ಥೈಯಿಸಿಕೊಳ್ಳುವ ಜತೆಗೆ ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ’ ಎಂದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಮಾತನಾಡಿ, ”ಯುವವಾಹಿನಿ ಸಂಘಟನೆ ಶಿಸ್ತಿಗೆ ಹೆಸರಾದುದು. ಬಿಲ್ಲವ ಯುವಕರನ್ನು ತೊಡಗಿಸಿಕೊಂಡಿರುವ ಈ ಸಂಘಟನೆ ನಾರಾಯಣ ಗುರುಗಳ ತತ್ವ ಸಂದೇಶದಂತೆ ನಡೆಯುತ್ತಿರುವುದು ಶ್ಲಾಘನೀಯ” ಎಂದರು. ಕ್ರೀಡಾಕೂಟವನ್ನು ಗಣೇಶ್ ನಾರಾಯಣ್ ಪಂಡಿತ್ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಧ್ವಜಾರೋಹಣ ನೆರವೇರಿಸಿದರು.


ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜಿತಾ ವಿ ಬಂಗೇರ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಉದ್ಯಮಿ ಶೈಲೇಂದ್ರ ವೈ. ಸುವರ್ಣ ಯುವವಾಹಿನಿ ಕೇಂದ್ರ ಸಮಿತಿಯ ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ, ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಯೋಗೀಶ್ ಬಿಕೊಟ್ಟು, ಕಾರ್ಯದರ್ಶಿ ಪ್ರಶಾಂತ್ ಪಡೋಡಿ, ಕೋಶಾಧಿಕಾರಿ ರಕ್ಷಿತ್ ಬಜಿರೆ, ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕರಾದ ಸುಜಿತ್ ಬಜಿರೆ, ಅಕ್ಷಿತ್ ಕಂಬಳದಡ್ಡ, ಸ್ವಾಗತ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕುಕ್ಕೇಡಿ, ಸಂಚಾಲಕರಾದ ಶಿವಪ್ರಕಾಶ್ ಅಂಬಾಶ್ರೀ, ಅರುಣ್ ಕೋಟ್ಯಾನ್, ಸತೀಶ್ ಪಿ.ಎನ್ . ಇದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ಮತ್ತು ಕ್ರೀಡಾ ನಿರ್ದೇಶಕ ನವೀನ್ ಪಚ್ಚೇರಿ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು. ಸತೀಶ್ ಹೊಸ್ಮಾರ್ ಕಾರ್ಯಕ್ರಮ ನಿರೂಪಿಸಿದರು. ಮನಸೂರೆಗೊಂಡ ಸ್ಪರ್ಧೆ: ಕೆಸರುಗದ್ದೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳು ಮನಸೂರೆಗೊಂಡವು. ಪುರುಷ, ಮಹಿಳೆ ಮತ್ತು ಮಕ್ಕಳ ವಿಭಾಗಕ್ಕೆ ವಿವಿಧ ಕ್ರೀಡೆಗಳಾದ ವಾಲಿಬಾಲ್, ಕಬಡ್ಡಿ, ಹಗ್ಗ ಜಗ್ಗಾಟ, 100 ಮೀ.ಓಟ, ಉಪ್ಪಿನ ಮೂಟೆ ಓಟ, ರಿಲೇ, 5 ಕಾಲಿನ ಓಟ, ಮಾನವ ಪಿರಮಿಡ್, ಹಾಳೆ ಓಟ, ಸಂಗೀತ ಕುರ್ಚಿ, ತ್ರೋಬಾಲ್ ಮುಂತಾದ ಆಟಗಳು ನಡೆದವು. ಇರುವೈಲ್ ಪಾನಿಲ ಬಾಡ ಪೂಜಾರಿಯವರ ಕಂಬಳದ ತಾಟೆ ಮತ್ತು ಬೊಟ್ಟಿಮಾರ್ ಕೋಣಗಳಿಗೆ ಸನ್ಮಾನ ನಡೆಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!