ಬೆಂಗಳೂರು :- 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯದ ಪ್ರತಿಷ್ಠಿತ ಸಂಸ್ಥೆ ಯುವವಾಹಿನಿಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಜರುಗಿದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಸ್ತಾಂತರ ಮಾಡಿದರು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿರುವ ರಾಜ್ಯಾದ್ಯಂತ 33 ಘಟಕಗಳ ಮೂಲಕ 3000ಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ಯುವವಾಹಿನಿ ಸಂಸ್ಥೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ದಿನಾಂಕ 01 ನವೆಂಬರ್ 2022 ಮಂಗಳವಾರದಂದು
ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಇವರು ಕಿಕ್ಕಿರಿದು ತುಂಬಿದ ಕಲಾಕ್ಷೇತ್ರದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಇವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್ , ಇಂಧನ – ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ , ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ , ಶಾಸಕರಾದ ಉದಯ್ ಗರುಡಚಾರ್, ವಿಧಾನ ಪರಿಷತ್ ಸದಸ್ಯರಾದ ಟಿ ಎ ಶರವಣ ಹಾಗೂ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಉಪಸ್ಥಿತರಿದ್ದರು. ಪ್ರಶಸ್ತಿಯು ರೂ 5 ಲಕ್ಷ ನಗದು , 25 ಗ್ರಾಂ ತೂಕದ ರಾಜ್ಯೋತ್ಸವ ಚಿನ್ನದ ಪದಕ ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಬೆಂಗಳೂರು ಘಟಕ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ 100ಕ್ಕೂ ಅಧಿಕ ಮಂದಿ ಸದಸ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 67ಮಂದಿ ಸಾಧಕರು ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡ 10 ಸಂಸ್ಥೆಗಳಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
Congratulations,may God bless with many more awards.