Yuvavahini

NOV 13, 2022 3.03 PM IST

ಯುವವಾಹಿನಿ (ರಿ.) ಉಡುಪಿ ಘಟಕ

ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕು ಅಗತ್ಯ :- ಅಮೃತರಾಜ್

ಉಡುಪಿ :- ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು. ಗುರು ಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ವಿಶೇಷವಾಗಿ ನಮ್ಮ ಸಮಾಜದ ಹೆಮ್ಮೆಯ ಸಂಸ್ಥೆಯಾದ ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಖಂಡಿತಾ ಒಳಿತು ಸಾಧ್ಯ ಎಂದು ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ತಿಳಿಸಿದರು. ಅವರು ದಿನಾಂಕ 13 ನವೆಂಬರ್ 2022ರಂದು ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜರಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರಾರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುದೇವರಿಗೆ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಾರ್ಥನೆಯನ್ನು ಹರ್ಷಿತ ಮತ್ತು ಜ್ಞಾನೇಶ್ವರಿ ಇವರು ನೆರವೇರಿಸಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಮಹಾಬಲ ಅಮೀನ್ ಸರ್ವರನ್ನು ಸ್ವಾಗತಿಸಿದರು. ವಿದ್ಯಾನಿಧಿ ನಿರ್ದೇಶಕರಾದ ಪ್ರವೀಣ್ ಡಿ ಪೂಜಾರಿ ಪ್ರಸ್ತಾವಿಸಿದರು. ಶೈಕ್ಷಣಿಕವಾಗಿ ಸಾಧನೆ ಮಾಡಿದ ಘಟಕದ ಸದಸ್ಯರ ಮಕ್ಕಳಾದ ಭರತ್, ಲೇಖನ, ಶ್ರವ್ಯಾ ಹಾಗೂ ಪೂಜಾ ಇವರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಸುಜಾತ ಪ್ರವೀಣ್ ಸನ್ಮಾನಿತರನ್ನು ಪರಿಚಯಿಸಿದರು. ವಿದ್ಯಾನಿಧಿಗೆ ಸಂಗ್ರಹಿಸಿದ ದೇಣಿಗೆ ರೂ 52,000/- ವನ್ನು ಪ್ರವೀಣ್ ಡಿ ಪೂಜಾರಿ ಹಾಗೂ ಭಾಸ್ಕರ ಪೂಜಾರಿ ಅಲೆವೂರು ಅಧ್ಯಕ್ಷರಿಗೆ ಹಸ್ತಾಂತರಿಸಿದರು. 16 ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡಿ ಪ್ರೋತ್ಸಾಹಿಸಲಾಯಿತು. ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ ಪೂಜಾರಿ ಇವರು ಹಿತನುಡಿದರು. ದಿನಾಂಕ 20/11/2022 ರಂದು ನಡೆಯಲಿರುವ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಂಚಾಲಕರಾದ ಭಾಸ್ಕರ ಸುವರ್ಣ ಸರ್ವರನ್ನು ಆ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ಮಹಾಬಲ ಅಮೀನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಿಗೆ ಗೌರವ ಸ್ಮರಣಿಕೆಯೊಂದಿಗೆ ಸತ್ಕರಿಸಲಾಯಿತು. ಕಾರ್ಯದರ್ಶಿ ವಿನೋದ್ ಮಂಚಿ ವಂದಿಸಿದರು.ಕುಮಾರಿ ಶ್ರೀಲಕ್ಷ್ಮೀ ಹಾಗೂ ಕುಮಾರಿ ನವೀಷಾ ಕಾರ್ಯಕ್ರಮ ನಿರೂಪಿಸಿದರು.ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಮಕ್ಕಳ ಪೋಷಕರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!