Yuvavahini

NOV 13, 2022 5.48 PM IST

ಯುವವಾಹಿನಿ (ರಿ.) ಕುಪ್ಪೆಪದವು

ಯುವವಾಹಿನಿ ಸೇವಾ ಮನೋಭಾವ ಹೊಂದಿರುವ ವಿಭಿನ್ನ ಸಂಸ್ಥೆ : ಡಾ. ಭರತ್ ವೈ ಶೆಟ್ಟಿ

ಕುಪ್ಪೆಪದವು :- ಯುವವಾಹಿನಿಯ ಶಿಸ್ತು ಬದ್ಧ ಕಾರ್ಯಕ್ರಮ, ಪಾರದರ್ಶಕತೆ, ಎಲ್ಲವನ್ನು ಗಮನಿಸಿ ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಈ ಸಂಸ್ಥೆಯು ಬೇರೆ ಸಂಘಟನೆಗಿಂತ ವಿಭಿನ್ನವಾಗಿದೆ. ಸೇವಾ ಮನೋಭಾವ ಹೊಂದಿರುವ ಸಂಸ್ಥೆಯ ಕಾರ್ಯಕ್ರಮಕ್ಕೆ ಬೇರೆ ಯಾವ ಕಾರ್ಯಕ್ರಮದ ಒತ್ತಡವಿದ್ದರೂ ಕೂಡ ಪಾಲ್ಗೊಳ್ಳುವ ಅವಕಾಶ ಬಿಟ್ಟುಕೊಡಲಾರೆ. ಯುವವಾಹಿನಿ ಸಂಸ್ಥೆಗೆ ಯಾವುದೇ ರೀತಿಯ ಸಹಕಾರ ನೀಡಲು ಸದಾ ಸಿದ್ಧ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಮತ್ತು ತತ್ವಾದರ್ಶಗಳು ಸರ್ವರಿಗೂ ಅನ್ವಯವಾಗುವಂತಿವೆ ಎಂದು ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ ತಿಳಿಸಿದರು. ಅವರು ಕುಪ್ಪೆಪದವು ನೇಲಚ್ಚಿಲ್ ನಾಗಂದಡಿ ಕ್ರೀಡಾಂಗಣದಲ್ಲಿ ಜರಗಿದ ಯುವವಾಹಿನಿ ಕುಪ್ಪೆಪದವು ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ , ಸಾಧಕರಿಗೆ ಸನ್ಮಾನ , ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಜಗದೀಶ್ ದುರ್ಗ ಕೋಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸತೀಶ್ ಹೊಸಮನೆ ನೂತನ ಪದಾಧಿಕಾರಿಗಳ ಪ್ರಕ್ರಿಯೆ ನಡೆಸಿಕೊಟ್ಟರು. ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಕುಪ್ಪೆ ಪದವು ಗ್ರಾಮ ಪಂಚಾಯತ್ ಅಧ್ಯಕ್ಷ ಡಿ ಪಿ ಹಮ್ಮಬ್ಬ, ಘಟಕದ ಕಾರ್ಯದರ್ಶಿ ರಕ್ಷಿತ್ ಅಟ್ಟೆ ಪದವು, ನೂತನ ಅಧ್ಯಕ್ಷ ಸೌಮ್ಯ ಕೋಟ್ಯಾನ್, ನೂತನ ಕಾರ್ಯದರ್ಶಿ ರಜನಿ, ಮುತ್ತೂರು ಗ್ರಾಮ ಪಂಚಾಯತ್ ಸದಸ್ಯರಾದ ಪುಷ್ಪ ನಾಯಕ್, ಸುಷ್ಮಾ ಸಂತೋಷ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಕೋಶಾಧಿಕಾರಿ ಜಗದೀಶ್ ಚಂದ್ರ ಡಿ. ಕೆ ಹಾಜರಿದ್ದರು. ಗೌರವಾರ್ಪಣೆ :
ಶಾಸಕ ಡಾ. ಭರತ್ ಶೆಟ್ಟಿ ವೈ, ರಾಷ್ಟ್ರಮಟ್ಟದ ವೇಟ್ ಲಿಫ್ಟರ್ ಆಳ್ವಾಸ್ ವಿದ್ಯಾರ್ಥಿನಿ ನಿಶ್ಮಿತಾ ಜೆ ಪೂಜಾರಿ, ಬಜ್ಪೆ ಪೊಲೀಸ್ ಠಾಣೆಯ ಎ ಎಸ್ ಐ ಗೋಪಾಲ್ ಕೃಷ್ಣ ಕುಂದರ್, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫೈನಲ್ ಲಿಸ್ಟ್ ಶ್ರಾವ್ಯ ಕಟ್ಟೆ ಮಾರ್, ಹಿರಿಯರಾದ ಉಮೇಶ್ ಆಮೀನ್ ನಾಗಂದಡಿ, ಜಗದೀಶ್ ದುರ್ಗ ಕೋಡಿ ಮತ್ತು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ್ ಆಮೀನ್ ಮಟ್ಟು ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅರುಣ್ ಕುಮಾರ್ ಅಂಬೆಲೊಟ್ಟು ಸ್ವಾಗತಿಸಿದರು. ಅಜಯ್ ಆಮೀನ್ ಪ್ರಸ್ತಾವಿಕವಾಗಿ ಮಾತನಾಡಿದರು. ರಜನಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!