ಕಂಕನಾಡಿ :- ದಿನಾಂಕ 14 ನವೆಂಬರ್ 2022ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ಘಟಕದ ವತಿಯಿಂದ ನೆಕ್ಕರೆಮಾರ್ ಅಂಗನವಾಡಿಯಲ್ಲಿ ಚಿಣ್ಣರೊಂದಿಗೆ ಸುಸಮಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಸ್ಥಳೀಯ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ ನಮ್ಮ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ರವರಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಪೃಥ್ವಿರಾಜ್ ವಹಿಸಿದ್ದರು. ಅಂಗನವಾಡಿ ಶಿಕ್ಷಕಿ ಪುಷ್ಪರವರು ಪ್ರಾರ್ಥಿಸಿ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿಯ ನೂತನ ಶಿಕ್ಷಕಿ ಕುಮಾರಿ ಪ್ರತೀಕ್ಷಾರವರು ಧನ್ಯವಾದ ಸಮರ್ಪಿಸಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಸುರೇಖ ಮೋಹನ್, ನಿರಂಜಯ ನಾರಾಯಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬ್ಲಾಕ್ ಸೊಸೈಟಿಯ ಅಧ್ಯಕ್ಷರಾದ ಹರಿಣಿ.ವಿ.ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಘಟಕದ ವತಿಯಿಂದ ಮಕ್ಕಳಿಗೆ ಹಣ್ಣು ಹಂಪಲು, ಪುಸ್ತಕ ಹಾಗೂ ಪೆನ್ಸಿಲ್ ಕಿಟ್ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಹಾಗೂ ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.