ಕಡಬ :- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಕಡಬ ಘಟಕದ 2022-23ನೇ ಸಾಲಿನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ದಿನಾಂಕ 19 ನವೆಂಬರ್ 2022 ನೇ ಶನಿವಾರದಂದು ಶ್ರೀ ದುರ್ಗಂಬಿಕಾ ಅಮ್ಮನವರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದ ಪುತ್ತೂರು ಬಿಲ್ಲವ ಸಂಘದ ಕೋಶಾಧಿಕಾರಿ ಬಿ. ಟಿ ಮಹೇಶ್ಚಂದ್ರ ಸಾಲ್ಯಾನ್ ಇವರು ಈ ವರ್ಷದ ಕೆಲಸ ಕಾರ್ಯಗಳನ್ನು ಗಮನಿಸಿ ಅಭಿನಂದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಾತನಾಡಿ ಸಮಾಜಮುಖಿ ಕಾರ್ಯಗಳೊಂದಿಗೆ ಕಡಬ ಯುವವಾಹಿನಿ ಘಟಕವು ಮುಂಚೂಣಿಯಯಲ್ಲಿದೆ ಎಂದು ಅಭಿನಂದಿಸಿ, ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಪರಿಚಯವನ್ನು ನಿಕಟ ಪೂರ್ವ ಅಧ್ಯಕ್ಷರಾದ ಶಿವಪ್ರಸಾದ್ ನೂಚಿಲ ಇವರು ವಾಚಿಸಿ, ನೂತನ ತಂಡ ಶುಭಾಶಯ ತಿಳಿಸಿದರು, ಕಾರ್ಯಕ್ರಮದಲ್ಲಿ 8 ವಿದ್ಯಾರ್ಥಿಗಳಿಗೆ ಎಂ ಸುಂದರ ಕರ್ಕೇರ ಮರ್ಧಾಳ ಇವರು ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ನೂತನ ತಂಡಕ್ಕೆ ಶುಭಾಶಯ ತಿಳಿಸಿದರು, ಹಾಗೂ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರನ್ನು ಹಾಗೂ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿಯಾದ ಶಿವಪ್ರಸಾದ್ ನೂಚಿಲ,ಹಾಗೂ ಘಟಕದ ಅಧ್ಯಕ್ಷರಾದ ಪ್ರವೀಣ್ ಓಂಕಾಲ್ ಕಾರ್ಯದರ್ಶಿ ಕೃಷ್ಣಪ್ಪ ಅಮೈ ಯವರನ್ನು ಗೌರವಿಸಲಾಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಕೃಷ್ಣಪ್ಪ ಅಮೈ ಮಾತನಾಡಿ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಕೆಲಸ ಕಾರ್ಯ ಗಳಿಗೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು. ಕಾರ್ಯಕ್ರಮಕ್ಕೆ ಆಗಮಿಸಿದ ಉಪ್ಪಿನಂಗಡಿ, ಮಾಣಿ, ಪುತ್ತೂರು, ಸುಳ್ಯ ಘಟಕದ ಪದಾಧಿಕಾರಿಗಳು ನೂತನ ತಂಡಕ್ಕೆ ಶುಭಾಶಯ ತಿಳಿಸಿದರು, ಕಾರ್ಯಕ್ರಮದಲ್ಲಿ ಕುಮಾರಿ ವಾಸುದೇವನ್ ಮಾಜಿ ಜಿಲ್ಲಾಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರವೀಣ್ ಓಂಕಾಲ್ ಈ ವರ್ಷದಲ್ಲಿ ನಡೆದ ಎಲ್ಲ ಕೆಲಸ ಕಾರ್ಯಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ನಡೆಸಿಕೊಟ್ಟ ಎಲ್ಲರಿಗೂ ಧನ್ಯವಾದ ಸಲ್ಲಿಸಿ ನೂತನ ತಂಡಕ್ಕೆ ಶುಭಾಶಯ ತಿಳಿಸಿದರು ವೇದಿಕೆಯಲ್ಲಿರುವ ಗಣ್ಯರಿಗೆ ನೆನಪಿನ ಕಾಣಿಕೆ ನೀಡಿದರು. ದೀಕ್ಷಿತ್ ಪಣೆಮಜಲು ಪ್ರಾರ್ಥಿಸಿ, ಘಟಕದ ಮಾಜಿ ಅಧ್ಯಕ್ಷರಾದ ಜನಾರ್ದನ ಬಿ ಎಲ್ ಪ್ರಸ್ತಾವನೆಯೊಂದಿಗೆ ಎಲ್ಲರನ್ನು ಸ್ವಾಗತಿಸಿದರು, ಘಟಕದ ಕಾರ್ಯದರ್ಶಿ ಕೃಷ್ಣಪ್ಪ ಅಮೈ ವಾರ್ಷಿಕ ವರದಿಯನ್ನು ಮಂಡಿಸಿದರು ಕಾರ್ಯಕ್ರಮವನ್ನು ಕೃತಿಕಾ ಬಂಗೇರ ಬಲ್ಯ ನಿರೂಪಿಸಿ ನಿಯೋಜಿತಾ ಕಾರ್ಯದರ್ಶಿ ಪ್ರಶಾಂತ್ ಏನ್. ಎಸ್ ಧನ್ಯವಾದ ನೆರವೇರಿಸಿದರು… ರಾಷ್ಟ ಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡು ಸೇರಿರುವ ಎಲ್ಲರಿಗೂ ಲಘು ಉಪಹಾರ ವ್ಯವಸ್ಥೆ ಮಾಡಲಾಗಿತ್ತು.