ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು.
ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಹೃಶಿಕೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಕೆ.ಯೋಗೀಶ್ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ ಸುರತ್ಕಲ್ ಘಟಕ ಅಧ್ಯಕ್ಷ ವಿವೇಕ್ ಬಿ. ಕೋಟ್ಯಾನ್ ಕಾರ್ಯಕ್ರಮ ನಡೆಸಿಕೊಟ್ಟರು. ಶಾಸಕ ಡಾ.ಭರತ್ ಶೆಟ್ಟಿ ಭೇಟಿ ನೀಡಿದರು. 200 ಮಂದಿ ಕಣ್ಣು ಪರೀಕ್ಷೆ ಮಾಡಿಸಿಕೊಂಡರು. 137 ಮಂದಿಗೆ ಎಂಸಿಎಫ್ ವತಿಯಿಂದ ಕನ್ನಡಕ್ಕ ವಿತರಣೆ, 26 ಮಂದಿಗೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ತಿಳಿಸಲಾಯಿತು. ಮಧುಮೇಹ ಉಚಿತ ರಕ್ತ ಪರೀಕ್ಷೆ ನಡೆಸಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.