Yuvavahini

DEC 25, 2022 8.51 AM IST

ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

 

ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022 ಡಿಸೆಂಬರ್ 25 ರಂದು ಭಾನುವಾರದಂದು ಅರ್ಪಣ ತೆರೆದ ಸಭಾಂಗಣ ವಿಜಯಾ ಕಾಲೇಜು ಮುಲ್ಕಿನಲ್ಲಿ ಸಂಪನ್ನಗೊಂಡಿತು.

ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಪ್ರಶಸ್ತಿ ಲಭಿಸಿದೆ : ವಿ.ಸುನೀಲ್ ಕುಮಾರ್
ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ ಮಾದರಿಯಾಗಿದೆ, ಯುವವಾಹಿನಿ ಮಾಡಿರುವ ಸಮಾಜಮುಖಿ ಕಾರ್ಯಗಳನ್ನು ಮನಗಂಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯು ಒಕ್ಕೊರಲಿನಿಂದ ಯುವವಾಹಿನಿ ಸಂಸ್ಥೆಯನ್ನು ಆಯ್ಕೆ ಮಾಡಿರುವುದು ಸಾಧಿಸಿದ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ, ಯುವಸಮುದಾಯದ ಪ್ರೇರಕ ಶಕ್ತಿಯಾಗಿರುವ ಯುವವಾಹಿನಿಗೆ ಅರ್ಹವಾಗಿಯೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದು ಯುವವಾಹಿನಿಯ ಮುಖವಾಣಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ಬಿಡುಗಡೆಗೊಳಿಸಿ ತಿಳಿಸಿದರು.

ಯುವ ಸಮುದಾಯದ ಕನಸು ನನಸು ಮಾಡುತ್ತಿರುವ ಯುವವಾಹಿನಿ : ಸೂರ್ಯಕಾಂತ್ ಜೆ ಸುವರ್ಣ

ಯುವ ಸಮುದಾಯದ ಕನಸು ಯುವವಾಹಿನಿ ನನಸು ಮಾಡುತ್ತಿದೆ ಎಂದು ಸಮಾವೇಶ ಉದ್ಘಾಟಿಸಿದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ತಿಳಿಸಿದರು. ತಂದೆ ಜಯ ಸಿ ಸುವರ್ಣರ ಕನಸುಗಳಲ್ಲಿ ಒಂದಾದ ನಮ್ಮ ಸಮುದಾಯದ ಯುವಕರು ಐಎಎಸ್ , ಐಪಿಎಸ್ ಮುಂತಾದ ಮಹತ್ತರ ಹುದ್ದೆಗಳನ್ನು ಪಡೆದು ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸುವಲ್ಲಿ ಶ್ರಮ ವಹಿಸಬೇಕೆಂದು ತಿಳಿಸಿ ಸಮಾವೇಶಕ್ಕೆ ಶುಭ ಹಾರೈಸಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಶ್ರೀ ಗೋಕರ್ಣನಾಥ ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರ ಮಾತನಾಡಿ ಯುವ ಸಮುದಾಯದ ಮೂಲಕ ಜಾಗ್ರತರಾದ ಯುವವಾಹಿನಿ ಇವತ್ತು ಎಲ್ಲಾ ಕ್ಷೇತ್ರದಲ್ಲಿ ಅಮೂಲಾಗ್ರ ಸಾಧನೆಯನ್ನು ಮಾಡಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ ಈ ನಿಟ್ಟಿನಲ್ಲಿ ಯುವವಾಹಿನಿಯ ಜವಾಬ್ದಾರಿ ಹೆಚ್ಚಾಗಿದೆ ನಾರಾಯಣ ಗುರುಗಳ ತತ್ವಾದರ್ಶಗಳೊಂದಿಗೆ ಇನ್ನಷ್ಟು ಸಮಾಜಮುಖಿಯೊಂದಿಗೆ ಸಾಗಲಿ ಎಂದು ಉಪನ್ಯಾಸ ನೀಡಿದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಅಧ್ಯಕ್ಷತೆ ವಹಿಸಿದ್ದರು. ಮುಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್, ಚಲನಚಿತ್ರನಟ ರಾಹುಲ್ ಅಮೀನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್‍ಕುಮಾರ್ ,ಬೆಹರೈನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಮತ್ತು ಭಾರತೀಯ ವೈದ್ಯಕೀಯ ಸಂಘದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ಪುರಸ್ಕೃತರಾದ ಡಾ.ಸದಾನಂದ ಪೂಜಾರಿ ಇವರಿಗೆ 2022ನೇ ಸಾಲಿನ ಯುವವಾಹಿನಿ ವಿಶೇಷ ಪುರಸ್ಕಾರ , ಅಂತರಾಷ್ಟ್ರೀಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಪೂಜಾರಿ ವಿಟ್ಲ, ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಚಿನ್ನದ ಪದಕ ವಿಜೇತೆ ಕು|ರಶ್ಮಿ ಜಿ.ಅಂಚನ್ ಕುಳಾಯಿ ಹಾಗೂ ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕದೊಂದಿಗೆ ಸ್ನಾತಕೋತ್ತರ ಪದವಿ ಪಡೆದ ಡಾ.ವಿನಾಯಕ ಎನ್ ಅಂಚನ್ ಇವರಿಗೆ 2022ನೇ ಸಾಲಿನ ಯುವವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪ್ರಸ್ತುತ ಸಾಲಿನಲ್ಲಿ ಡಾಕ್ಟರೇಟ್ ಪದವಿ ಪಡೆದ ಡಾ.ಲಾವಣ್ಯ ಡಿ. ಕಟೀಲು , ಡಾ. ಪ್ರವೀಣ್ ಸುವರ್ಣ , ಡಾ.ನೇಹಾ ಅಭಿನಂದನ್ , ಡಾ. ಮೀರಾ ದೇವಿ , ಡಾ.ವರುಣ್ ವೆಂಕಟೇಶ್ ಮತ್ತು ಡಾ. ಶಿಲ್ಪಶ್ರೀ ಇವರುಗಳಿಗೆ ಯುವವಾಹಿನಿ ಗೌರವ ಅಭಿನಂದನೆಯನ್ನು ಮಾಡಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ 2022-23 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು. ಪದಾಧಿಕಾರಿಗಳ ಪರಿಚಯ ಪತ್ರವನ್ನು ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರು ವಾಚಿಸಿದರು. ಬೆನ್ನಿ ಬೇಸಾಯದ ಮೂಲಕ ಹಡೀಲು ಬಿದ್ದ ಬಂಜರು ಭೂಮಿಯಲ್ಲಿ ಸಮೃದ್ಧ ಬೆಳೆಯನ್ನು ಬೆಳೆದ ಭತ್ತವನ್ನು ಘಟಕದ ಸದಸ್ಯರಿಗೆ ಸಾಂಕೇತಿಕ ವಾಗಿ ಉಮನಾಥ್ ಕೋಟ್ಯಾನ್ ಹಸ್ತಾಂತರಿಸಿದರು. ನಂತರ ಯುವವಾಹಿನಿ ಸದಸ್ಯರ ಉದ್ಯೋಗದ ಕುರಿತಾದ ಮಾಹಿತಿಗಳನ್ನು ಒಳಗೊಂಡ ಸ್ವಾವಲಂಬಿ ಹಸ್ತಪ್ರತಿಯನ್ನು ಚಲನಚಿತ್ರ ನಟ ರಾಹುಲ್ ಅಮೀನ್ ಬಿಡುಗಡೆ ಗೊಳಿಸಿದರು. ಸಂದರ್ಭದಲ್ಲಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ರೇಖಾ ಗೋಪಾಲ್ ಉಪಸ್ಥಿತರಿದ್ದರು.


ಸುಂದರ ಸಭಾಂಗಣದಲ್ಲಿ ನಡೆದ ಶಿಸ್ತು ಬದ್ಧ ಸಮಾರಂಭ , ಸಮಯ ಪ್ರಜ್ಞೆ , ಹೀಗೆ ಹಲವು ಹೊಸತನದಿಂದ ಕೂಡಿದ ಕಾರ್ಯಕ್ರಮ ಸರ್ವರ ಪ್ರಶಂಸೆಗೆ ಪಾತ್ರವಾಯಿತು. 2021-22ನೇ ಸಾಲಿನಲ್ಲಿ ಸಹಕಾರ ನೀಡಿದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳು, ಸಂಪಾದಕರು ಹಾಗೂ ಸಂಚಾಲಕರಿಗೆ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ಸ್ಮರಣಿಕೆ ನೀಡಿ ಗೌರವಿಸಿದರು. ಯುವವಾಹಿಯ 35ನೇ ವಾರ್ಷಿಕ ಸಮಾವೇಶ ನಿರ್ದೇಶಕರಾದ ಹರೀಂದ್ರ ಸುವರ್ಣ ಹಾಗೂ ಸಮಾವೇಶ ಸಂಚಾಲಕರಾದ ಭಾರತಿ ಭಾಸ್ಕರ್ ಕೋಟ್ಯಾನ್ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಗೌರವಿಸಿ ಅಭಿನಂದಿಸಿದರು. ಸಮಾವೇಶದ ಆತಿಥ್ಯ ವಹಿಸಿದ ಮುಲ್ಕಿ ಘಟಕದ ವತಿಯಿಂದ 2021-22ನೇ ಸಾಲಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯಲ್ಲಿ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ ಉದಯ್ ಅಮೀನ್ ಮಟ್ಟು ದಂಪತಿಗಳನ್ನು ಮುಲ್ಕಿ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಾರ್ಷಿಕ ವರದಿ ಮಂಡಿಸಿದರು, ಮುಲ್ಕಿ ಘಟಕದ ಜಯಕುಮಾರ್ ಕುಬೆವೂರು ಹಾಗೂ ಮೋಹನ್ ಸುವರ್ಣ ಪ್ರಾರ್ಥಿಸಿ, ಸಮಾವೇಶ ನಿರ್ದೇಶಕ ಹರೀಂದ್ರ ಸುವರ್ಣ ಮುಲ್ಕಿ ಸ್ವಾಗತಿಸಿದರು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ವಿಜಯಕುಮಾರ್ ಕುಬೆವೂರು ಪ್ರಸ್ತಾವಿಸಿ, ಸಮಾವೇಶ ಸಂಚಾಲಕಿ ಭಾರತಿ ಭಾಸ್ಕರ್ ಕೋಟ್ಯಾನ್ ಧನ್ಯವಾದ ನೀಡಿದರು. ಸ್ಮಿತೇಶ್ ಬಾರ್ಯ ಹಾಗೂ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!