Yuvavahini

JUL 31, 2016 5.47 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು ತೋರಿಸಿ ಶ್ರೀಮತಿ ತುಳಸಿ ಇವರಿಂದ ತರಬೇತಿ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಶಾಂತಿವನ ಟ್ರಸ್ಟ್ ನಡೆಸುವ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಯಲ್ಲಿ ನಾಲ್ಕು ಬಾರಿ ಪ್ರಥಮ ಪ್ರಶಸ್ತಿ ಗಳಿಸಿದ ಅಕ್ಷತ ಕೊರಿಯಾದಲ್ಲಿ ನಡೆದ 11ನೆಯ ಅಂತಾರಾಷ್ಟ್ರೀಯ ಕಲಾ ವಿನಿಮಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ 2005 ಹಾಗೂ 2008 ರಲ್ಲಿ ಶಂಕರ್‍ಸ್ ಇಂಟರ್‌ನ್ಯಾಷನಲ್ ಮಕ್ಕಳ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿದ್ದಾರೆ. ನವ ದೆಹಲಿಯ ಸೆಂಟರ್ ಫಾರ್ ಕಲ್ಚರಲ್ ರಿಸೋರ್ಸ್ ಆಂಡ್ ಟ್ರೈನಿಂಗ್‌ನ ದೃಶ್ಯ ಕಲೆಯಲ್ಲಿ ಫೆಲೋಶಿಪ್ ಪಡೆದು ಹೈದರಾಬಾದ್‌ನಲ್ಲಿ ಅಅಖಖಿ ನಡೆಸಿದ ರಾಷ್ಟ್ರಮಟ್ಟದ ಪ್ರತಿಭಾ ಉತ್ಸವದಲ್ಲಿ ಜನಮನ ಗೆದ್ದಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ.

ರಾಜ್ಯ, ರಾಷ್ಟ್ರ ಮಟ್ಟದ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಜಾನಪದ ನೃತ್ಯ, ಸಂಗೀತ ಹಾಗೂ ಕಲೆಯಲ್ಲಿ ಹಲವು ಪ್ರಶಸ್ತಿ ಗಳಿಸುತ್ತಾ ಮುನ್ನಡೆಯುತ್ತಿರುವ ಈ ಯುವ ಶಿಕ್ಷಕಿಯ ಸಾಧನೆಯನ್ನು ಗುರುತಿಸಿ ಯುವ ಸಾಧನಾ ಪುರಸ್ಕಾರವನ್ನು ನೀಡಲು ಯುವವಾಹಿನಿ ಹೆಮ್ಮೆ ಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!