Yuvavahini

DEC 24, 2023 9.00 AM IST

ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು.

ಸಮಾವೇಶದ ವಿಹಂಗಮ ನೋಟ

ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

36 ನೇ ವಾರ್ಷಿಕ ಸಮಾವೇಶ ಉದ್ಘಾಟಿಸಿದ ಪದ್ಮರಾಜ್ ಆರ್

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು.

ನಾಯಕರು ಎನಿಸಿಕೊಂಡವರಲ್ಲಿ ನ್ಯೂನ್ಯತೆ ಇರಬಾರದು ‌. ಅವರು ನಮಗೆ ಮಾದರಿ ಮತ್ತು ಆದರ್ಶರಾಗಿರಬೇಕು. ಬ್ರಹ್ಮಶ್ರೀ ನಾರಾಯಣಗುರುಗಳ ಸಿದ್ಧಾಂತ ಸಂಪೂರ್ಣವಾಗಿ ಅಳವಡಿಸಿಕೊಂಡರೆ ನಮ್ಮ ಗುರಿಯನ್ನು ಮುಟ್ಟಲು ಸಾಧ್ಯ ಎಂದು ಪ್ರದಾನ ಭಾಷಣಕಾರರಾಗಿ ಆಗಮಿಸಿದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ.ತುಕರಾಮ ಪೂಜಾರಿ ತಿಳಿಸಿದರು.

2023-24 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ

ಮುಖ್ಯಮಂತ್ರಿಗಳ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ ಬಂಗೇರ, ಉದ್ಯಮಿಗಳಾದ ನಟೇಶ್ ಪೂಜಾರಿ ಬೆಂಗಳೂರುಲೋಕೇಶ್ ಪೂಜಾರಿ ಕಲ್ಲಡ್ಕ, ವಾರ್ಷಿಕ ಸಮಾವೇಶದ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾರ್ದನ್ ಸ್ಕೈ ಪ್ರಾಪರ್ಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಯುವಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿದರು. ಯುವಸಿಂಚನ ಸಂಪಾದಕ ದಿನಕರ್ ಡಿ.ಬಂಗೇರ ಹಾಗು ಕಾರ್ಯನಿರ್ವಾಹಕ ಸಂಪಾದಕ ಜಗದೀಶ್‌ಚಂದ್ರ ಡಿ.ಕೆ ಹಾಗೂ ಯುವಸಿಂಚನ ಸಂಪಾದಕೀಯ ಮಂಡಳಿ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು, ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ. ನೂತನ ಅಧ್ಯಕ್ಷ ಹರೀಶ್ ಕೆ.ಪೂಜಾರಿ ನೇತೃತ್ವದ‌ ತಂಡಕ್ಕೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರತಿಜ್ಞಾವಿಧಿ ಸ್ವೀಕರಿಸುತ್ತಿರುವ ನೂತನ ಕಾರ್ಯಕಾರಿ ಸಮಿತಿ ಸದಸ್ಯರು

ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಕೆ.ಚಿತ್ತರಂಜನ್ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಜಿಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ, ಮನೋಜ್ ಕುಮಾರ್ ಕಟ್ಟೆಮಾರ್, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಅಕ್ಷತಾಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು.

ವೇದಾವತಿ, ಚೈತ್ರಾ, ಜಯಂತ್ ಅಮೀನ್, ಯೋಗ್ನ ಅಮೀನ್‌ಗೆ ಯುವವಾಹಿನಿ ಗೌರವ ಅಭಿನಂದನೆ ಸಲ್ಲಿಸಲಾಯಿತು.

ಡಾ.ಸಂಜಿತ್ ಎಸ್ ಅಂಚನ್, ಡಾ.ಶುಭಕರ್ ಅಂಚನ್, ಡಾ. ಅಕ್ಷತಾ ಕೋಟ್ಯಾನ್, ಡಾ.ಲತಾ ಬಿ. ಅವರಿಗೆ ಯುವವಾಹಿನಿ ಅಭಿನಂದನೆ, ಅಭಿನ್ ಬಂಗೇರಗೆ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನಿಸಲಾಯಿತು.

ಯುವವಾಹಿನಿಯ 33 ಘಟಕಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮನಸೂರೆಗೊಂಡ 33 ಘಟಕಗಳ ಸ್ವಾಗತ ಗೋಪುರ

ಕಳೆದ ಒಂದು ವರ್ಷದ ಯಶಸ್ವಿ ಪಯಣಕ್ಕಾಗಿ ಸಹಕಾರ ನೀಡಿದ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಕೇಂದ್ರ ಸಮಿತಿಯ ಅಧ್ಯಕ್ಷರು ಗೌರವ ಸಲ್ಲಿಸಿದರು.

ಸಮಾವೇಶವು ಅಪರಾಹ್ನ 3.00 ಗಂಟೆ ಸುಧೀರ್ಘ ಸಮಯದವರೆಗೂ ಮುಂದುವರಿದರೂ, ಶುಭಲಕ್ಷ್ಮೀ ಸಭಾಂಗಣವು ಜನಸ್ತೋಮದಿಂದ ಕಂಗೊಳಿಸಿರುವುದು ಈ ಸಮಾವೇಶದ ವೈಶಿಷ್ಟ್ಯತೆಯಾಗಿತ್ತು.

ಬಂಟ್ವಾಳ ಘಟಕದ ಸದಸ್ಯರು

ಸಮಾವೇಶದ ಅತ್ಯಧಿಕ ಹಾಜರಾತಿ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪಣಂಬೂರು ಕುಳಾಯಿ ಘಟಕ, ದ್ವಿತೀಯ ಬಹುಮಾನ ಪಡೆದ ಮಂಗಳೂರು ಘಟಕ ಹಾಗೂ ತೃತೀಯ ಬಹುಮಾನ ಪಡೆದ ಕೊಲ್ಯ ಘಟಕಗಳಿಗೆ ಬಂಟ್ವಾಳ ಘಟಕದ ಅಧ್ಯಕ್ಷರು ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಸಮಾವೇಶದ ಅದೃಷ್ಟಶಾಲಿ ಪ್ರತಿನಿಧಿಗೆ ಸ್ಮಾರ್ಟ್‌ವಾಚ್ ಉಡುಗೊರೆ ನೀಡಲಾಯಿತು.

ಕಿಕ್ಕಿರಿದು ತುಂಬಿದ ಶುಭಲಕ್ಷ್ಮೀ ಸಭಾಂಗಣ

ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ ವಾರ್ಷಿಕ ವರದಿ ಮಂಡಿಸಿದರು, ವಾರ್ಷಿಕ ಸಮಾವೇಶದ ಸಂಚಾಲಕರಾದ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು. ಬಂಟ್ವಾಳ ಘಟಕದ ಉಪಾಧ್ಯಕ್ಷ ದಿನೇಶ್ ಸುವರ್ಣ ರಾಯಿ ಹಾಗು ಬೆಳ್ತಂಗಡಿ ಘಟಕದ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!