Yuvavahini

DEC 24, 2023 12.04 PM IST

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ

ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಒಲಿದ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಬಂಟ್ವಾಳ : ದಿನಾಂಕ 24 ಡಿಸೆಂಬರ್ 2023 ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಶುಭ ಘಳಿಗೆ ಓದಗಿಬಂತು.

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಕ್ಷಣ

ಹಿಂದುಳಿದ ವರ್ಗಗಳ ಹಾಗೂ ಮೂರ್ತೆದಾರರ ಆರ್ಥಿಕ ಬೆಳವಣಿಗೆ, ಮಹಿಳಾ ಸಬಲೀಕರಣ ಹಾಗೂ ಸಮಾಜದ ಅಶಕ್ತ ಕುಟುಂಬಗಳನ್ನು ಗುರುತಿಸಿ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ವಿದ್ಯಾ ನಿಧಿ ದತ್ತುಸ್ವೀಕಾರ, ಹೀಗೆ ಹತ್ತು ಹಲವು ಮಜಲುಗಳ ನಿರಂತರ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಗೌರವಿಸಿ ಯುವವಾಹಿನಿ ಸಂಸ್ಥೆಯು “ಯುವವಾಹಿನಿ ಸಾಧನಾ ಶ್ರೇಷ್ಠ 2023” ಪ್ರಶಸ್ತಿಗೆ ಸಜಿಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೊಂಬು ವಾದ್ಯಗಳ ಹಿಮ್ಮೇಳದ ಸ್ವಾಗತ

ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರು ಡಾ।ತುಕಾರಾಮ ಪೂಜಾರಿ, ಉದ್ಯಮಿಗಳಾದ ನಿರ್ಮಲ್ ಜಗನ್ನಾಥ ಬಂಗೇರ, ನಟೇಶ್ ಪೂಜಾರಿ, ಲೋಕೇಶ್ ಪೂಜಾರಿ ಕಲ್ಲಡ್ಕ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ವಾರ್ಷಿಕ ಸಮಾವೇಶದ ನಿರ್ದೇಶಕರಾದ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ,ನೂತನ ಅಧ್ಯಕ್ಷರಾದ ಹರೀಶ್.ಕೆ.ಪೂಜಾರಿ, ನೂತನ ಪ್ರಧಾನ ಕಾರ್ಯದರ್ಶಿ ಜಗದೀಶ್‌ಚಂದ್ರ ಡಿ.ಕೆ ಹಾಗೂ ಯುವವಾಹಿನಿಯ 33 ಘಟಕಗಳ ಅಧ್ಯಕ್ಷರುಗಳ ಸಮ್ಮುಖದಲ್ಲಿ ಕೊಂಬು ವಾದ್ಯಗಳ ಹಿಮ್ಮೇಳದ ಸ್ವಾಗತದೊಂದಿಗೆ ವೇದಿಕೆಗೆ ಬರಮಾಡಿಕೊಂಡು, ಸಂಸ್ಥೆಯು ನಡೆದ ಬಂದ ಹಾದಿಯ ರೂಪುರೇಷೆ ಸಾಧನಾ ಪರಿಚಯವನ್ನು ಸಾಕ್ಷ್ಯ ಚಿತ್ರದ ಮೂಲಕ, ಮೈಸೂರು ಪೇಟ,ಜರಿತಾರಿ ಶಾಲು,ಅತ್ಯಾಕರ್ಷಕ ಸ್ಮರಣಿಕೆ ಹಾಗೂ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಪತ್ರ ನೀಡಿ ಗೌರವ ಆದರಗಳಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ

ಯುವವಾಹಿನಿ ಸಾಧನಾ ಶ್ರೇಷ್ಠ 2023

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!