Yuvavahini

JUL 31, 2016 5.52 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ರಕ್ಷಿತ್ ಆರ್. ಕೋಟ್ಯಾನ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ.

ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ.

ಕಿರಿವಯಸ್ಸಿನಲ್ಲಿ ದೇಹದಾರ್ಡ್ಯತೆಯತ್ತ ಆಕರ್ಷಿತರಾದ ನಂತರ ತನ್ನ ಸಾಧನೆಯ ಒಂದೊಂದೇ ಮೆಟ್ಟಿಲನ್ನು ಏರಲಾರಂಭಿಸಿ ಜಿಲ್ಲಾ ಮಟ್ಟದಲ್ಲಿ 5 ಚಿನ್ನ, 1 ಬೆಳ್ಳಿ ಪದಕ ಗಳಿಸಿ ಮತ್ತೆ ಹಿಂದಿರುಗಿ ನೋಡಲಿಲ್ಲ. ನೋಡ ನೋಡುತ್ತಿರುವಂತೆ ರಾಜ್ಯಮಟ್ಟದಲ್ಲಿ ಅದ್ಭುತ 13 ಚಿನ್ನ, 6 ಬೆಳ್ಳಿ ಪದಕಗಳನ್ನು ಬಾಚಿ ಜನರು ನಿಬ್ಬೆರಗಾಗುವಂತೆ ಮಾಡಿದ್ದಾರೆ ಶ್ರೀ ರಕ್ಷಿತ್ ಕೋಟ್ಯಾನ್.

ಯುನಿವರ್ಸಿಟಿ ಮಟ್ಟದಲ್ಲಿ ಚಿನ್ನದ ಪದಕದೊಂದಿಗೆ ಸತತ 3 ಬಾರಿ ಮಿಸ್ಟರ್ ಮಂಗಳೂರು ಯುನಿವರ್ಸಿಟಿ, ರಾಷ್ಟ್ರ ಮಟ್ಟದ ಆಲ್ ಇಂಡಿಯಾ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿ ನಡೆದ ಆಲ್ ಇಂಡಿಯ ಯೂನಿವರ್ಸಿಟಿ ಸ್ಪರ್ಧೆಯಲ್ಲಿ ಮಿಸ್ಟರ್ ಆಲ್ ಇಂಡಿಯಾ ಯೂನಿವರ್ಸಿಟಿ-2016 ಪ್ರಶಸ್ತಿಯನ್ನು ಬಾಚಿಕೊಂಡು ನಮ್ಮ ಸಮುದಾಯವೇ ಮೈನವಿರೇಳಿಸುವಂತೆ ಮಾಡಿದ್ದಾರೆ.

ಶಿಸ್ತು, ಸಂಯಮ ಮತ್ತು ಉತ್ತಮ ನಡತೆಯ ಈ ಯುವಕ ಕಟಪಾಡಿಯ ವಜ್ರ ಜಿಮ್‌ನಲ್ಲಿ ತನ್ನ ಅಭ್ಯಾಸ ಮುಂದುವರೆಸುತ್ತಿದ್ದು ಸಮಾಜದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸುವುದು ಖಚಿತ. ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪೆ ಹಾಗೂ ಹಿರಿಯರ ಮತ್ತು ಸಮಾಜದ ಎಲ್ಲರ ಆಶೀರ್ವಾದ ಅವರ ಮೇಲಿದೆ. ಯುವ ಸಾಧನಾ ಪುರಸ್ಕಾರವನ್ನು ಅವರಿಗೆ ನೀಡಿ, ಯುವವಾಹಿನಿಯ ಸಮಸ್ತ ಸದಸ್ಯರು ಅತ್ಯಂತ ಹೆಮ್ಮೆ ಪಡುತ್ತೇವೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!