Yuvavahini

JAN 12, 2024 10.00 AM IST

ಯುವವಾಹಿನಿ ಪುತ್ತೂರು ಘಟಕದಿಂದ‌ ವಿದ್ಯಾಸ್ಪೂರ್ತಿ : 2024

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು.

ಯುವವಾಹಿನಿ ವಿದ್ಯಾಸ್ಪೂರ್ತಿ ಉದ್ಘಾಟನೆ

ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರ ಸಹಕಾರದೊಂದಿಗೆ ತಾಲೂಕಿನ ಎಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ಮತ್ತು ಪರೀಕ್ಷೆಯನ್ನು ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ ವಿದ್ಯಾ ಸ್ಫೂರ್ತಿ-2024 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸ್ಪೂರ್ತಿ ತುಂಬಿದ ಜೇಸೀ ರಾಜೇಂದ್ರ ಭಟ್

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ವಿದ್ಯಾ ಸ್ಪೂರ್ತಿ- 2024 ತರಭೇತಿ ಕಾರ್ಯಗಾರ ಉದ್ಘಾಟಿಸಿ 2024ನೇ ವರ್ಷ ಎಲ್ಲರ ಬಾಳಲ್ಲಿ ಸಂತಸ ಹಾಗೂ ನೆನಪಿನಲ್ಲಿ ಉಳಿಯುವ ಸಾಧನೆಯ ವರುಷವಾಗಲಿ ಎಂದು ಶುಭ ಹಾರೈಸಿದರು.

ಮುಖ್ಯ ಆತಿಥಿಗಳಾಗಿ ಭಾಗವಹಿಸಿದ ಪುತ್ತೂರು ನಗರಸಭಾ ಆಯುಕ್ತ ಮಧು ಎಸ್. ಮನೋಹರ್ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ವಿದ್ಯಾರ್ಥಿಗಳು ಪರೀಕ್ಷೆಗೆ ಪೂರ್ವ ತಯಾರಿಯೊಂದಿಗೆ ಮಾನಸಿಕವಾಗಿ ಸಿದ್ಧರಾಗಬೇಕು. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದಲ್ಲಿ ಏನಾಗಬೇಕು ಎನ್ನುವ ಧೈಯವನ್ನು ಈಗಲೇ ಮೈಗೂಡಿಸಿಕೊಂಡು ಹೆಜ್ಜೆ ಇಡುವವರಾಗಬೇಕು ಎಂದರು.

ಪುತ್ತೂರಿನಲ್ಲಿ ವಿದ್ಯಾಸ್ಪೂರ್ತಿಗೆ ಬೃಹತ್ ವಿದ್ಯಾರ್ಥಿ ಸಮೂಹ

ಅಧ್ಯಕ್ಷತೆ ವಹಿಸಿದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎಸ್ ಮಾತನಾಡಿ, ಯುವವಾಹಿನಿ ಪುತ್ತೂರು ಘಟಕವು ವರ್ಷಂಪ್ರತಿ ವಿದ್ಯಾ ಸ್ಫೂರ್ತಿ ಕಾರ್ಯಕ್ರಮದಡಿಯಲ್ಲಿ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಒಳ್ಳೆಯ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ. ಮಾತ್ರವಲ್ಲ ತಾಲೂಕಿನ ಹಲವು ಪ್ರೌಢಶಾಲೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉತ್ಸುಕರಾಗಿ ಭಾಗವಹಿಸಿರುವುದು ನಮಗೆ ಖುಶಿ ತಂದಿದ್ದು ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದರು.

ಏಕಾಗ್ರತೆ ಮೂಡಿಸಿದ ವಿದ್ಯಾಸ್ಪೂರ್ತಿ

ತರಭೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟ  ಜೇಸಿಐ ಸಂಸ್ಥೆಯ  ಅಂತರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಮಾತನಾಡಿ ಪ್ರತಿ  ವರ್ಷ ಜ.12 ರಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಿಕೊಳ್ಳಲಾಗುತ್ತಿದೆ. ಯುವಸಮೂಹಕ್ಕೆ ಸ್ಪೂರ್ತಿ ಕೊಟ್ಟಂತಹ, ಜಗತ್ತಿಗೆ ಅಧ್ಯಾತ್ಮಿಕತೆಯನ್ನು ಪರಿಚಯಿಸಿದವರು ಸ್ವಾಮಿ ವಿವೇಕಾನಂದರು. ಅವರ ಜನ್ಮದಿನಾಚರಣೆಯನ್ನು ಇಂದು ನಾವು ಸಂತೋಷದಿಂದ ಆಚರಿಸುತ್ತಿದ್ದೇವೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಕಷ್ಟದಿಂದ ಎದುರಿಸುವವರಾಗದೆ ಬಹಳ ಇಷ್ಟಪಟ್ಟು ಎದುರಿಸುವವರಾಗಬೇಕು. ತಾನು ಸಾಧಿಸಬಲ್ಲೆ ಎಂಬ ಅಚಲ ನಿರ್ಧಾರ, ಆತ್ಮವಿಶ್ವಾಸ, ಗುರಿಯನ್ನು ಹೊಂದಿದ್ದಲ್ಲಿ ಉಜ್ವಲ ಭವಿಷ್ಯ ನಿಮ್ಮದಾಗುವುದು. ಪುತ್ತೂರಿನ ವಿದ್ಯಾರ್ಥಿಗಳು ಬಹಳ ಪ್ರತಿಭಾವಂತರು ಹಾಗೂ ಬುದ್ದಿವಂತರು. ಆದ್ದರಿಂದ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉತ್ತಮ ಅಂಕ ಗಳಿಸುವವರಾಗುಂತೆ ತಿಳಿಸಿದರು.

ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸಮಿತ್ ಪಿ. ಸ್ವಾಗತಿಸಿ, ವಿದ್ಯಾನಿಧಿ ನಿರ್ದೇಶಕ ರವಿಕುಮಾರ್ ಕೆ. ವಂದಿಸಿದರು. ಅವಿನಾಶ್ ಹಾರಾಡಿ ಹಾಗೂ ಪ್ರಿಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!