Yuvavahini

JUL 31, 2016 6.00 AM IST

ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ.

ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿ ಇವರು ಗಳಿಸಿದ್ದು ಬರೋಬ್ಬರಿ 22 ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿಗಳು. 2015 ರಲ್ಲಿ 40ಕ್ಕೂ ಹೆಚ್ಚು ದೇಶಗಳ ಶ್ರೇಷ್ಠ ಛಾಯಾಗ್ರಾಹಕರು ಸ್ಪರ್ಧಿಸಿದ ಕಣದಲ್ಲಿ ರಜತ ಪದಕ (ಪಶ್ಚಿಮ ಬಂಗಾಳದಲ್ಲಿ) ಅದೇ ವರ್ಷ ನವೆಂಬರ್‌ನಲ್ಲಿ 45 ದೇಶಗಳು ಭಾಗವಹಿಸಿದ ಸ್ಪರ್ಧೆಯಲ್ಲಿ ಗೋಲ್ಡನ್ ಸರ್ಕ್ಯೂಟ್ ನಡೆಸಿದ ಪ್ರವಾಸಿ ಛಾಯಾಗ್ರಹಣ ವಿಭಾಗದಲ್ಲಿ ಪ್ರತಿಷ್ಠಿತ ಚಿನ್ನದ ಪದಕ ಗಳಿಸಿರುವುದು ನಮ್ಮ ಸಮುದಾಯ ಮಾತ್ರವಲ್ಲ ಇಡೀ ದೇಶವೇ ಅಭಿಮಾನ ಪಡತಕ್ಕ ಸಾಧನೆಯಾಗಿದೆ.

ವಿದ್ಯಾರ್ಥಿ ಜೀವನದಲ್ಲಿ 2015-16 ರಲ್ಲಿ ಶ್ರೇಷ್ಠ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾಗಿ, ಸರ್ವ ಕಾಲೇಜು ಸ್ನಾತಕೋತ್ತರ ಸಂಘಟನೆಯ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜ್ಯಮಟ್ಟದಲ್ಲಿ 4 ಪ್ರಥಮ ಸಹಿತ 7 ಪ್ರಶಸ್ತಿ, ರಾಷ್ಟ್ರ ಮಟ್ಟದಲ್ಲಿ 7 ಪ್ರಶಸ್ತಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ 4 ಪ್ರಥಮ ಸಹಿತ 7 ಪ್ರಶಸ್ತಿ ಛಾಯಾಗ್ರಹಣ ಕ್ಷೇತ್ರದಲ್ಲಿ ಗಳಿಸಿದ ಶ್ರೀ ಬಂಟ್ವಾಳ್‌ರವರು ಹವ್ಯಾಸಿ ಉರಗತಜ್ಞ, ಶ್ರೇಷ್ಠ ಕ್ರಿಕೆಟಿಗ, ವನ್ಯಜೀವಿ ಮತ್ತು ಪ್ರಕೃತಿ ದೃಶ್ಯ ಛಾಯಾಗ್ರಹಣದ ಮಹೋನ್ನತ ಸಾಧಕ.

ಸಮಾಜ ವಿಕಾಸದ ಕನಸಿನ ಯುವವಾಹಿನಿಯ ಯುವ ಸಾಧನಾ ಪುರಸ್ಕಾರಕ್ಕೆ ಪಾತ್ರರಾದ ಶ್ರೀ ನಿತ್ಯಪ್ರಕಾಶ್ ಬಂಟ್ವಾಳ್‌ರವರ ಸಾಧನೆ ಇನ್ನೂ ಮಿಂಚಿ ನಿತ್ಯ ಪ್ರಕಾಶಿಸಲಿ ಎಂಬುದು ನಮ್ಮೆಲ್ಲರ ಹೆಮ್ಮೆಯ ಹಾರೈಕೆ.

One thought on “ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!