Yuvavahini

JAN 25, 2024 8.44 AM IST

ಯುವವಾಹಿನಿ (ರಿ.) ವೇಣೂರು ಘಟಕದ ಪದಗ್ರಹಣ

ಯುವವಾಹಿನಿ ಯುವಜನತೆಯ ಅಶಾಕಿರಣ: ಪದ್ಮರಾಜ್ ಆರ್

ವೇಣೂರು: ಬಿಲ್ಲವ ಸಮಾಜದ ಭರವಸೆಯ ಸಂಘಟನೆಯಾಗಿ ಹೊರಹೊಮ್ಮಿದ ಯುವವಾಹಿನಿ, ಯುವಜನತೆಯ ಆಶಾಕಿರಣವಾಗಿ ಮೂಡಿಬರುತ್ತಿರುವುದು ಸಂತಸದ ವಿಚಾರ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷರಾದ ಪದ್ಮರಾಜ್ ಆರ್ ತಿಳಿಸಿದರು.

ಅವರು ದಿನಾಂಕ 2024 ನೇ ಜನವರಿ 25 ರಂದು ಕೊಕ್ರಾಡಿ ಬ್ರಹ್ಮಶ್ರೀ ನಾರಾಯಣಗುರು ಸಬಾಭವನದಲ್ಕಿ ಜರಗಿದ ಯುವವಾಹಿನಿ(ರಿ.) ವೇಣೂರು ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯರಾದ ಕೆ ಹರೀಶ್ ಕುಮಾರ್ ಕಾರ್ಯಕ್ರಮವನ್ನು ಉಧ್ಘಾಟಿಸಿ ಶುಭಹಾರೈಸಿದರು.

ಘಟಕದ ಅಧ್ಯಕ್ಷರಾದ ಹರಿಣಿ ಕರುಣಾಕರ ಪೂಜಾರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿರವರು ಶುಭಕರ ಪೂಜಾರಿ ನೇತ್ರತ್ವದ ನೂತನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತಿನ್ ಮುಂಡೇವು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ವಲಯದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಪ್ರಗತಿಪರ ಕೃಷಿಕರದ ಶ್ರೀಧರ್ ಪೂಜಾರಿ ಭೂತಡ್ಕ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಡಿಯ ಅಧ್ಯಕ್ಷರಾದ ಮಂಜಪ್ಪ ಪೂಜಾರಿ ಹಾಗೂ ನೂತನ ಅಧ್ಯಕ್ಷರಾದ ಶುಭಕರ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತಿರಿದ್ದರು.

ಘಟಕದ ನಿಕಟಪೂರ್ವ ಅಧ್ಯಕ್ಷರಾದ ಯೋಗೀಶ್ ಬಿಕ್ರೋಟ್ಟು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಸಭೆಗೆ ಪರಿಚಯಿಸಿದರು.

ಸನ್ಮಾನ

ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು ರಾಜೇಶ್ ಬಿ, ಕಂಬಳ ಯಜಮಾನರಾದ ಗಣೇಶ್ ನಾರಾಯಣ್ ಪಂಡಿತ್ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ರವಿಚಂದ್ರ ವಿ.ಸಾಲ್ಯಾನ್, ಕಂಬಳ ಓಟಗಾರರು ಸಾವ್ಯ ಗಂಗಯ್ಯ ಪೂಜಾರಿಯವರನ್ನು ಗೌರವಿಸಿ ಅಭಿನಂದಿಸಲಾಯಿತು.

ಆಸರೆ ಸೇವಾ ಯೋಜನೆ ಬೈಕ್ ಡಿಕ್ಕಿಯಾಗಿ ಕಾಲು ಮುರಿದುಕೊಂಡಿರುವ ಸಾವ್ಯಡೆಂಗಳು ನಿವಾಸಿ ಮಾಧವ್ ರವರಿಗೆ ಯುವವಾಹಿನಿ ಆಸರೆ ಯೋಜನೆಯ ಮೂಲಕ ಸಹಾಯಹಸ್ತ ನೀಡಲಾಯಿತು.

ಘಟಕದ ಸ್ಥಾಪಕ ಅಧ್ಯಕ್ಷರಾದ ನಿತೇಶ್ ಹೆಚ್ ಪ್ರಸ್ತಾವನೆಗೈದರು.

ಕಾರ್ಯದರ್ಶಿ ಸುಜಿತ್ ಬಜಿರೆ ವರದಿ ವಾಚಿಸಿದರು.  ಉಪನ್ಯಾಸಕರಾದ ರಾಕೇಶ್ ಮೂಡುಕೋಡಿ ಮತ್ತು ಶಶಿಧರ್ ಕೊಕ್ರಡಿ ಕಾರ್ಯಕ್ರಮ ನಿರ್ವಹಿಸಿದರು.

ನೂತನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!