ಮೂಡಬಿದರೆ: ಸಮಾಜಮುಖಿ ಕೆಲಸ ಮಾಡುವ ಯುವವಾಹಿನಿಯು ಸ್ವಚ್ಛ ಪರಿಕಲ್ಪನೆಯುಲ್ಲಿ ತನ್ನನ್ನು ತೊಡಗಿಸಿಕೊಂಡದ್ದು ಅನುಕರಣೀಯ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಯುವವಾಹಿನಿ ಮೂಡುಬಿದಿರೆ ಘಟಕದ ಆಶ್ರಯದಲ್ಲಿ ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು 04/02/2024 ರಂದು ಮೂಡುಬಿದಿರೆ ಸ್ವರಾಜ್ಯ ಮೈದಾನ, ಮಾರಿಗುಡಿ ದೇವಸ್ಥಾನ ಹಾಗೂ ರಿಂಗ್ ರೋಡ್ ಬಳಿ ನಡೆದಾಗ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ತೋಡಾರು ದಿವಾಕರ ಶೆಟ್ಟಿ, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜಿನ ಡಾ.ಅಸ್ಮಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಶಂಕರ್ ಮುಂಬೈ, ರಾಜಮೋಹನ ಶೆಟ್ಟಿ, ಕೃಷ್ಣ ಶೆಟ್ಟಿ, ಗಿರೀಶ್ ಕೋಟ್ಯಾನ್, ಶಿವರಾಂ ಕಡಂದಲೆ, ಮಾಜಿ ಅಧ್ಯಕ್ಷರುಗಳಾದ ಹರಿಪ್ರಸಾದ್ ಕೆ, ನವಾನಂದ, ಸುಶಾಂತ್ ಕರ್ಕೇರ ಪದಾಧಿಕಾರಿಗಳು, ಸದಸ್ಯರುಗಳು, ಆಳ್ವಾಸ್ ಹೋಮಿಯೋಪತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ನಾಗರಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.