ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕ ಹಾಗೂ ಅಂಬಲಪಾಡಿ ರೋಟರಿ ಜಂಟಿ ಆಶ್ರಯದಲ್ಲಿ ಭಾರತ ಸರ್ಕಾರ ದತ್ತೋಪಂಥ ಠೇಂಗಡಿ, ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇವರ ವತಿಯಿಂದ ಮಹಿಳೆಯರಿಗಾಗಿ ಅರ್ಧ ದಿನದ ಸ್ವಉದ್ಯೋಗ ಉಚಿತ ತರಬೇತಿ ಕಾರ್ಯಾಗಾರವು ಯುವವಾಹಿನಿ ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 21-02-24 ರಂದು ನಡೆಯಿತು.
ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶಿಬಿರ ಆರಂಭಗೊಂಡಿತು.
ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಮೇಶ್, ಶಿಕ್ಷಣಾಧಿಕಾರಿಗಳು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ದಿ ಮಂಡಳಿ, ರೇಖಾ ಗೋಪಾಲ್ ಹಾಗೂ ಹರಿಣಾ ಜೆ ರಾವ್ ಸ್ವಉದ್ಯೋಗಕ್ಕೆ ಬೇಕಾದ ಉತ್ಪನ್ನಗಳ ತಯಾರಿಯ ಪ್ರಾತ್ಯಕ್ಷಿಕೆಯ ಜೊತೆಗೆ ಮಾರುಕಟ್ಟೆಯಲ್ಲಿ ಉತ್ಪನ್ನಗಳ ಮಾರಾಟದ ಮಾಹಿತಿ ನೀಡಿದರು. ಐವತ್ತಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡರು. ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಉಡುಪಿ ನಗರಸಭಾ ಪರಿಸರ ಅಭಿಯಂತರರಾದ ಸ್ನೇಹಾ ಕೆ ಇವರು ಮಾತನಾಡಿ ತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಸಂಚಾಲಕರಾದ ಸುಜಾತ ಪ್ರವೀಣ್ ಹಾಗೂ ರೋಟರಿ ಅಂಬಲಪಾಡಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಶೀಲಾ ಜಯಕರ್ ಕಾರ್ಯಕ್ರಮ ನಿರೂಪಿಸಿದರು.