Yuvavahini

MAR 04, 2024 3.46 PM IST

ಯುವವಾಹಿನಿ (ರಿ) ಉಡುಪಿ ಘಟಕದ ಆಶ್ರಯದಲ್ಲಿ

ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ

ಉಡುಪಿ: ಮಾರ್ಚ್ 4 ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಚಿಟ್ಟಾಡಿಯ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ರವಿವಾರ ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ನಿವೃತ್ತ ಪ್ರಾಂಶುಪಾಲ ಕನರಾಡಿ ವಾದಿರಾಜ ಭಟ್ ಅವರಿಗೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಹಿರಿಯ ಬೈದೇರುಗಳ ದರ್ಶನ ಪಾತ್ರಿ ಕೋಟಿ ಪೂಜಾರಿ ಸೂಡ ಅವರಿಗೆ ಪ್ರದಾನಿಸಲಾಯಿತು.

ಸಮಾಜಸೇವಕ ಈಶ್ವರ ಮಲ್ಪೆ ಅವರ ಪರವಾಗಿ ಅವರ ಪತ್ನಿ ಗೀತಾ ಅವರಿಗೆ ಸಮ್ಮಾನಿಸಲಾಯಿತು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಹಾಪುರುಷರ ವ್ಯಕ್ತಿತ್ವ ಮಾದರಿ: ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಪುರಸ್ಕೃತ ಕನರಾಡಿ

ಪ್ರಶಸ್ತಿ ಸ್ವೀಕರಿಸಿದ ಕನರಾಡಿ ವಾದಿರಾಜ ಭಟ್ ಮಾತನಾಡಿ, ನಾರಾಯಣಗುರುಗಳು ಜ್ಞಾನಜ್ಯೋತಿ ಬೆಳಗಿದವರು. ಕೋಟಿ ಚೆನ್ನಯರು ಸತ್ಯ, ಧರ್ಮ, ನ್ಯಾಯದ ಮೂಲಕ ವೀರ ಪುರುಷರಾಗಿದ್ದರು. ಎಲ್ಲಾ ದೇಶದ ಮಹಾಕಾವ್ಯಗಳಲ್ಲಿ ಇಂತಹ ವೀರ ನಾಯಕರು ಕಾಣಸಿಗುತ್ತಾರೆ. ತುಳುನಾಡಿನ ಅಂತಹ ನಾಯಕರು ಕೋಟಿ ಚೆನ್ನಯರು. ಸತ್ಯ, ಧರ್ಮ, ನ್ಯಾಯಕ್ಕಾಗಿ ಹುಟ್ಟಿ ತಮ್ಮನ್ನು ತಾವು ತ್ಯಾಗ ಮಾಡಿದವರು. ಅವರ ವ್ಯಕ್ತಿತ್ವ ನಮಗೆಲ್ಲ ಮಾದರಿಯಾಗಿದೆ. ಇವತ್ತಿನ ಕಾಲಘಟ್ಟದಲ್ಲಿ ಯುವಕರ ಸಂಘಟನೆ, ಪ್ರಚಾರಕಾರ್ಯಗಳು ಸಮಾಜಕ್ಕೆ ಮಾದರಿಯಾಗಬೇಕು. ಹಿರಿಯರ ಜತೆ ಯುವಸಮುದಾಯ, ಯುವ ಸಮುದಾಯದೊಂದಿಗೆ ಮಕ್ಕಳು ಇಂತಹ ಕಾರ್ಯಕ್ರಮಕ್ಕೆ ಬಂದರೆ ಸಮಾಜ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಿದೆ ಎಂದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಮುಕ್ಕ ಶ್ರೀನಿವಾಸ ಕಾಲೇಜಿನ ಪ್ರೊ| ಎಂ.ಎಸ್.ಕೋಟ್ಯಾನ್ ಪ್ರಶಸ್ತಿ ಪ್ರದಾನಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಒಂದನೆ ಉಪಾಧ್ಯಕ್ಷ ಲೋಕೇಶ್ ಕೋಟ್ಯಾನ್ ಕುಳೂರು, ನಿವೃತ್ತ ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು ಉಪಸ್ಥಿತರಿದ್ದರು.

ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಸ್ತಾವನೆಗೈದರು. ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಅಶೋಕ್ ಕೋಟ್ಯಾನ್, ಸುಜಾತ ಪ್ರವೀಣ್, ಮಹೇಶ್ ಮಲ್ಪೆ ಸನ್ಮಾನ ಪತ್ರ ವಾಚಿಸಿದರು.
ಯುವವಾಹಿನಿಯ ಸಂಘಟನಾ ಕಾರ್ಯದರ್ಶಿ ವಿನೋದ್ ಕುಮಾರ್ ಹಾಗೂ ಮಹಿಳಾ ಸಂಚಾಲಕಿ ಶ್ರೀಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸಂಧ್ಯಾ ಅಶೋಕ್ ಕೋಟ್ಯಾನ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!