ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೈಬರ್ ಕ್ರೈಂ ಮತ್ತು ಕಾನೂನು ಮಾಹಿತಿ ಕಾರ್ಯಾಗಾರ ದಿನಾಂಕ 6/03/2024 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಆಗಮಿಸಿ, ಸುಮಾರು ಒಂದೂವರೆ ಗಂಟೆಗಳ ಕಾಲ ಸಾಮಾಜಿಕ ಜಾಲತಾಣಗಳ ಉಪಯೋಗ ಮತ್ತು ದುರುಪಯೋಗ ಹಾಗೂ ಕೆಲವೊಂದು ಸಂದರ್ಭದಲ್ಲಿ ನಮಗಾಗುವ ವಂಚನೆಯ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ರೈಯವರು ವಹಿಸಿದ್ದರು. ಘಟಕದ ಅಧ್ಯಕ್ಷೆ ಅಮಿತಾಂಜಲಿ, ಮಾಜಿ ಅಧ್ಯಕ್ಷರುಗಳಾದ ರಘುನಾಥ ಮಾಬಿಯನ್,ಭಾಸ್ಕರ ಸುವರ್ಣ, ಯೂತ್ ರೆಡ್ ಕ್ರಾಸ್ ನ ಸಂಚಾಲಕರಾದ ಪ್ರಶಾಂತ್. ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹೇಶ್ ಮಲ್ಪೆಯವರು ಕಾರ್ಯಕ್ರಮ ನಿರೂಪಣೆಗೈದರು. ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.