Yuvavahini

MAR 08, 2024 3.19 PM IST

ಯುವವಾಹಿನಿ (ರಿ.) ಮಾಣಿ ಘಟಕದವತಿಯಿಂದ ಮಾತೆಯ ಮಡಿಲು

ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಹಿರಿದು-ಮಾಣಿಯಲ್ಲಿ ಆರತಿ ದಾಸಪ್ಪ

ಬಂಟ್ವಾಳ: ಮಕ್ಕಳಿಗೆ ಜೀವನ ಶಿಕ್ಷಣ ನೀಡಿ, ಸಂಸ್ಕಾರ ಕಲಿಸುವಲ್ಲಿ ತಾಯಿ ಪಾತ್ರ ಬಹಳ ಮುಖ್ಯ, ಕುಟುಂಬದ ಅಳಿವು ಉಳಿವು ಮಹಿಳೆ ಕೈಯಲ್ಲಿದೆ ಎಂದು ಕೊಡಪದವು ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕಿ ಆರತಿ ದಾಸಪ್ಪ ಹೇಳಿದರು.

ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ 08/03/2024 ಶುಕ್ರವಾರದಂದು ಮಾಣಿ ನಾರಾಯಣ ಗುರು ಸಭಾಭವನ ದಲ್ಲಿ ಜರುಗಿದ ಮಾತೆಯ ಮಡಿಲು ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತಾಡಿದರು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ( ರಿ.) ಮಾಣಿಯ ಮಹಿಳಾ ಅಧ್ಯಕ್ಷೆ ಹರಿಣಾಕ್ಷಿ ಮುರುವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿಯ ಅಧ್ಯಕ್ಷರಾದ ಸುರೇಶ್ ಸೂರ್ಯ, ಯುವವಾಹಿನಿ ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ ಮೊದಲಾದವರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಸ್ವಸ್ಥ ಮಹಿಳೆ- ಸ್ವಸ್ಥ ಮನೆ ಎಂಬ ವಿಚಾರವಾಗಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್, ಮಹಿಳೆಯರಿಗೆ ಆಗುವ ಅರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ನೀಡಿ, ಮಹಿಳೆಯರೊಂದಿಗೆ ಮುಕ್ತವಾಗಿ ಚರ್ಚಿಸಿದರು.

ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ ಎಂಬ ವಿಷಯದ ಬಗ್ಗೆ ವಕೀಲರು, ನೋಟರಿ ಶೋಭಾಲತಾ ಸುವರ್ಣ ವಿಚಾರ ವಿನಿಮಯ ಮಾಡಿ ಕಾನೂನನ್ನು ದುರುಪಯೋಗವಾಗದೆ ಸದುಪಯೋಗ ಪಡೆದುಕೊಳ್ಳಬೇಕು, ನಮ್ಮನ್ನು ಮೊದಲು ನಾವು ಅರ್ಥ ಮಾಡಿಕೊಳ್ಳಬೇಕು, ಸಂಸ್ಕಾರ ಯುಕ್ತವಾಗಿ ಜೀವನ ಸಾಗಿಸಿದರೆ ಯಾವ ಕಾನೂನಿನ ರಕ್ಷಣೆ ಅಗತ್ಯವಿಲ್ಲವೆಂದರು.

ಅಭಿನಂದನೆ

ಕಾರ್ಯಕ್ರಮದಲ್ಲಿ ಸಂಘದ 10 ಗ್ರಾಮಗಳ ಮಹಿಳಾ ಅಧ್ಯಕ್ಷರುಗಳನ್ನು, ಮಾಜಿ ಅಧ್ಯಕ್ಷರುಗಳನ್ನು, ಪಂಚಾಯತ್ ಸದಸ್ಯೆಯರುಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತಿ ಪ್ರಾರ್ಥಿಸಿದರು. ಕಾರ್ಯದರ್ಶಿ ಶಾಲಿನಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮುಜಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಶುಭ ಪೆರ್ನೆ ವಂದಿಸಿದರು. ಮಾಣಿ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕಿ ಉಷಾ ದಿನಕರ್ ಹಾಗೂ ರಾಜೇಶ್ ಬಲ್ಯ ನಿರೂಪಣೆಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!