ಯುವವಾಹಿನಿ(ರಿ.) ಕೊಲ್ಯ ಘಟಕದ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ದಿನಾಂಕ 23-02-2024ನೇ ಶುಕ್ರವಾರದಂದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು ಮುಗ್ದ ಮನಗಳೊಂದಿಗೆ ಒಲವಿನ ಸಂವಾದ ಎಂಬ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟು ಶಾಲಾ ಸಭಾಂಗಣದಲ್ಲಿ ನೆರವೇರಿತು.
ಕಾರ್ಯಕ್ರಮದ ಸುಸಂದರ್ಭದಲ್ಲಿ ಆನಂದಾಶ್ರಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳು ತಮ್ಮ ಜೀವನದಲ್ಲಿ ಬಹಳ ಅಗತ್ಯವಾಗಿ ಅಳವಡಿಸಿಕೊಳ್ಳಬಹುದಾದ ಮೌಲ್ಯಯುತವಾದ ಕಾರ್ಯಕ್ರಮವೆಂದು ಹರ್ಷ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಡಿ. ಸುವರ್ಣ ವಿದ್ಯಾರ್ಥಿಗಳ ಭವಿಷ್ಯದ ದಿನಗಳಿಗೆ ಸಂಬಂಧಿಸಿ ಮುಗ್ದ ಮನಗಳೊಂದಿಗೆ ಮಾತನಾಡಿದರು.
ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಧಾ ಸುರೇಶ್ ಅಧ್ಯಕ್ಷೀಯ ನುಡಿಯನ್ನಾಡಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಕೊಲ್ಯ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣದ ನಿರ್ದೇಶಕರಾದ ಭಾರತಿ ಸನಿಲ್ ಉಳ್ಳಾಲ ಪ್ರಸ್ತಾವನೆಗೈದು ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಶಿಕ್ಷಕಿ ವೀಣಾ ಧನ್ಯವಾದ ಅರ್ಪಿಸಿದರು. ಕೊಲ್ಯ ಘಟಕದ ಮಾಜಿ ಅಧ್ಯಕ್ಷರು ಕುಸುಮಾಕರ ಕುಂಪಲ ಕಾರ್ಯಕ್ರಮ ನಿರೂಪಿಸಿದರು.