ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅರೋಗ್ಯಮಾಹಿತಿ ಕಾರ್ಯಕ್ರಮ ದಿನಾಂಕ 10-3-2024 ರಂದು ಶ್ರೀ ಆದಿ ಜನಾರ್ದನ ದೇವಸ್ಥಾನದ ವಠಾರದಲ್ಲಿ ಜರಗಿತು.
ಕೊಳಚಿಕಂಬಳ ಶ್ರೀ ಜಾರಂದಾಯ ಮಹಿಳಾ ಮಂಡಳಿದ ಅಧ್ಯಕ್ಷರು ಲತಾ ಶೇಖರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ (ರಿ.) ಮೂಲ್ಕಿ ಘಟಕದ ಅಧ್ಯಕ್ಷರು ಮಾಧವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಹಿರಿಯ ಕೃಷಿಕೆ ಕಮಲ ಪೂಜಾರ್ತಿ ಕೊಲೆಕಾಡಿ ಹಾಗೂ ಸಂಪನ್ಮೂಲ ವ್ಯಕ್ತಿ ಆಯುಷ್ ಸೆಂಟರ್ ವೈದ್ಯಾಧಿಕಾರಿ ಶೋಭಾ ರಾಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಿನಯ ವಿಶ್ವನಾಥ್, ಮಹಿಳಾ ನಿರ್ದೇಶಕಿ ವೇದಾವತಿ ಜಯಕುಮಾರ್, ಉಪಸ್ಥಿತರಿದ್ದರು.
ಡಾ. ಶೋಭರಾಣಿಯವರು ಮಹಿಳಾ ಮಂಡಳಿಯ ಸದಸ್ಯರಿಗೆ ಅರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರು ಸ್ವಾಗತಿಸಿದರು ಕಾರ್ಯದರ್ಶಿ ವಂದಿಸಿದರು. ಮಾಜಿ ಅಧ್ಯಕ್ಷ ಉದಯ ಅಮೀನ್ ಮಟ್ಟು ನಿರೂಪಿಸಿದರು.