Yuvavahini

APR 14, 2024 3.18 AM IST

ಯುವವಾಹಿನಿ(ರಿ.) ಉಡುಪಿ ಘಟಕ

ಬಿಸು ಪರ್ಬದ ಪೊಸ ಕಣಿ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 14-04-2024ರ ಭಾನುವಾರ ಸಂಜೆ 3.30ಕ್ಕೆ ಯುಗಾದಿ ಹಬ್ಬದ ಆಚರಣೆ, ಬಿಸು ಕಣಿ ಬಗ್ಗೆ ಮಾಹಿತಿ, ಮಹಿಳೆಯರಿಗಾಗಿ ಕಾರ್ಯಕ್ರಮ, ತುಳಿಲಿಪಿ ಪರೀಕ್ಷೆ ಬರೆದವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಪ್ರಮಾಣ ಪತ್ರ, ಗುರುವಂದನೆ ಇತ್ಯಾದಿ ಕಾರ್ಯಕ್ರಮಗಳು ನಡೆದವು.

ನಾರಾಯಣ ಗುರುವರ್ಯರ ಭಾವಚಿತ್ರದ ಮುಂದೆ ಬಿಸು ಕಣಿಯನಿಟ್ಟು ದೀಪ ಹಚ್ಚಿ ಕೈಮುಗಿದು ಕಾರ್ಯಕ್ರಮ ಆರಂಭವಾಯಿತು. ಬಂದ ಸದಸ್ಯರಿಗೆಲ್ಲ ವಿವಿಧ ಆಟಗಳನ್ನು ಆಡಿಸಲಾಯಿತು. ಆಟೋಟ ಸ್ಪರ್ಧೆಗಳನ್ನು ನಡೆಸಿಕೊಟ್ಟವರು ಘಟಕದ ಮಾಜಿ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರು. ಮಕ್ಕಳ ಆಟ ಆಡುತ್ತಾ ಆಡುತ್ತಾ ಘಟಕದ ಸದಸ್ಯರು ಮಕ್ಕಳೇ ಆಗಿ ಹೋದರು. ಯುಗಾದಿಯ ಪಾಯಸದ ಸವಿಯನ್ನು ಮೆಲ್ಲುತ್ತಾ ನಿರರ್ಗಳ ವಾಗ್ಝರಿಯ ಅದ್ಭುತ ನಿರೂಪಕ, ಪ್ರಸ್ತುತ ಉಡುಪಿ ದಕ್ಷಿಣ ಕನ್ನಡದಲ್ಲಿ ಹೆಸರು ಮಾಡಿರುವ ಘಟಕದ ಸದಸ್ಯ ಶ್ರೀ ಸಚೇಂದ್ರ ಮುಂಬಾಗಿಲು ಅವರಿಂದ ಬಿಸುವಿನ ಬಗ್ಗೆ ತಿಳಿದುಕೊಂಡರು.

ಮಹಿಳೆ ಸಬಲೆ ಎಂಬ ವಿಚಾರದ ಕುರಿತು ಪುರುಷರು ಮಹಿಳೆಯರು ಎಲ್ಲರೂ ಸೇರಿ ಆರೋಗ್ಯಕರವಾದ ಸಂವಾದವನ್ನು ನಡೆಸಿಕೊಟ್ಟರು. ತುಳು ನಾಡಿನ ಹೆಣ್ಣು ಮಗಳು ಗಟ್ಟಿಗಿತ್ತಿ ಎನ್ನುವುದನ್ನು ತನ್ನ ಮಾತುಗಳಿಂದ ಬಹಳ ಸುಂದರವಾಗಿ ಕಟ್ಟಿಕೊಟ್ಟವರು ಸಚೇಂದ್ರ ಅಂಬಾಗಿಲು ಅವರು. ಜೈ ತುಳುನಾಡು ಇದರ ಸಹಯೋಗದೊಂದಿಗೆ ತುಳು ಲಿಪಿ ಕಲಿಕಾ ತರಬೇತಿ ಶಿಬಿರವನ್ನು ನಡೆಸಿದ ಬಳಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಮಾಣ ಪತ್ರವನ್ನು ಹಂಚಲಾಯಿತು. ಬಳಿಕ ಗುರುಗಳಿಗೆ ಗುರುವಂದನೆಯನ್ನು ಸಲ್ಲಿಸಲಾಯಿತು. ಗುರುಗಳು ಸಂಪೂರ್ಣ ಉಚಿತವಾಗಿ ತರಗತಿಗಳನ್ನು ನಡೆಸಿಕೊಟ್ಟಿದ್ದರು.

ಈ ಕಾರ್ಯಕ್ರಮದ ಸಂಚಾಲಕತ್ವವನ್ನು ಘಟಕದ ಮಹಿಳಾ ಸಂಚಾಲಕಿ ಲಕ್ಷ್ಮಿ ಅವರು ವಹಿಸಿಕೊಂಡಿದ್ದರು. ಅಧ್ಯಕ್ಷರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!