ಮಂಗಳೂರು: ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಅತ್ಯಂತ ಉಪಯುಕ್ತ ಕಾರ್ಯಕ್ರಮವಾಗಿದ್ದು ಇದರ ಉಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ರವರು ಯುವವಾಹಿನಿ(ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಫಲ್ಗುಣಿ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇವರ ಸಹಯೋಗದೊಂದಿಗೆ ದಿನಾಂಕ 17-04-2024ರ ಬೆಳಿಗ್ಗೆ 11.30ಕ್ಕೆ ಸರ್ಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರ ಇಲ್ಲಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಯನ್ನು ತಿಳಿಸಿದರು.
ವೃತ್ತಿ ಮಾರ್ಗದರ್ಶನದ ಬಗ್ಗೆ ಮಾಹಿತಿ ನೀಡಲು ಸಂತ ಎಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ರೊನಾಲ್ಡ್ ಪಿಂಟೋ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ನಂತರ ಸರ್ಕಾರಿ ಉದ್ಯೋಗ ಪಡೆಯುವ ಬಗ್ಗೆ ಮಾಹಿತಿ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಗೀತಾ ರಾವ್ ಮತ್ತು ಸಿಬ್ಬಂದಿ ವರ್ಗದವರು, ಲಯನ್ಸ್ ಕ್ಲಬ್ ಫಲ್ಗುಣಿ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಕೋಶಾಧಿಕಾರಿ ಶ್ರವಣ್ ಕೂಳೂರು, ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಮಧುಶ್ರೀ ಪ್ರಶಾಂತ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಲಯನ್ಸ್ ಕ್ಲಬ್ ಫಲ್ಗುಣಿ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಲೋಕೇಶ್ ಕೋಟ್ಯಾನ್, ಪುಷ್ಪರಾಜ್ ಕುಮಾರ್, ದ್ವಿತೀಯ ಉಪಾಧ್ಯಕ್ಷರಾದ ಗೀತಾ ವಸಂತ್, ಸಂಘಟನಾ ಕಾರ್ಯದರ್ಶಿ ಮುಕೇಶ್, ಸಾಂಸ್ಕೃತಿಕ ನಿರ್ದೇಶಕರಾದ ಸುಮಂಗಲಾ, ಕೋಶಾಧಿಕಾರಿ ವಿಘ್ನೇಶ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಗೀತಾ ರಾವ್ ಸಭೆಗೆ ಹಾಜರಿದ್ದ ಎಲ್ಲರನ್ನೂ ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದ ಸಮರ್ಪಣೆಯನ್ನು ಗೀತಾ ರಾವ್ ನಿರ್ವಹಿಸಿ, ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.