Yuvavahini

JUL 31, 2016 5.50 AM IST

ಯುವವಾಹಿನಿ ಗೌರವ ಅಭಿನಂದನೆ- 2016

ಸಮಾಜ ಕಾರ್ಯ ಕ್ಷೇತ್ರದ ಅಪೂರ್ವ ಸಾಧಕಿ ಡಾ| ಮಧುಮಾಲ

ಸಮಾಜ ಕಾರ್ಯ (Social work) ಕ್ಷೇತ್ರದ ವಿಷಯ ತಜ್ಞೆಯಾಗಿದ್ದು, ಅಧ್ಯಾಪನದೊಂದಿಗೆ ನಿರಂತರ ಅಧ್ಯಯನ, ಕ್ಷೇತ್ರ ಕಾರ್ಯ ಮಾಡುತ್ತಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವ ಡಾ| ಮಧುಮಾಲ ಒರ್ವ ಅಪೂರ್ವ ಸಾಧಕಿ, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ (social work Dept.)ದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ 11 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ದಿನ, ವಾರ, ಮಾಸ ಪತ್ರಿಕೆಗಳಲ್ಲಿ ಆಗಿಂದಾಗ್ಗೆ ಜನರನ್ನು ಜಾಗೃತಿಗೊಳಿಸುವ ಲೇಖನಗಳಿಂದ ಪ್ರಸಿದ್ಧಿ ಪಡೆದ ಇವರ ಮಹಿಳಾ ಸಮಾಜ ಸಂಬಂಧಿತ ವಿಚಾರಧಾರೆಗಳು, ಭಾಷಣಗಳು ಚಿಂತನಶೀಲವಾಗಿದೆ. ಸುಮಾರು ೩೦೦ಕ್ಕೂ ಮಿಕ್ಕಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಲ್ಲದೆ ಹತ್ತು ಹಲವು ನಾಯಕತ್ವ ತರಬೇತಿ ಶಿಬಿರಗಳನ್ನು ನಡೆಸಿಕೊಟ್ಟಿರುತ್ತಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕಿಯಾಗಿ, ಪ್ರಾಥಮಿಕ, ಪ್ರೌಢ ಶಾಲೆಗಳ ಪೋಷಕರ ಸಭೆಗೆ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಮೂಡಬಿದ್ರೆ ಬಿಲ್ಲವ ಸಂಘಟನೆಗೆ ಕಾಲ ಕಾಲಕ್ಕೆ ಸಮಯೋಚಿತ ಸಲಹೆಗಾರ್ತಿಯಾಗಿ, ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರಭುದ್ಧ ಚಿಂತನೆಗಳ ಪ್ರಬಂಧ ಮಂಡನೆ ಮಾಡಿ ಪ್ರಸಿದ್ಧರಾಗಿದ್ದಾರೆ. ಓರ್ವ ವಿಷಯ ತಜ್ಞೆಯಾಗಿ ಹಲವು ಸರಕಾರೇತರ ಸಂಸ್ಥೆಗಳಲ್ಲಿ ದುಡಿ ದಿರುವ ಇವರು ಓರ್ವ ಸಮಾಜಮುಖಿ ಚಿಂತಕಿ.

ಇವರು ದಕ್ಷಿಣ ಕನ್ನಡದ ಬುಡಕಟ್ಟು ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಸಬಲೀಕರಣ ಪ್ರಕ್ರಿಯೆ ಎಂಬ ವಿಷಯದಲ್ಲಿ ಬ್ರಹ್ಮಾವರ ಎಸ್.ಎಮ್.ಎಸ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ರವೀಂದ್ರ ನಾಥ್‌ರವರ ಮಾರ್ಗದರ್ಶನದಲ್ಲ ಅಧ್ಯಯನ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾನಿಯಲಯವು ಪಿಎಚ್‌ಡಿ (Ph.D) ಪದವಿ ನೀಡಿದೆ.

ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ನಿವೃತ್ತ ಪಂಚಾಯತ್ ವಿಸ್ತರಣಾಧಿಕಾರಿ ಶ್ರೀಯುತ ದಾಮೋದರ್ ಹಾಗೂ ದಿ| ಜಲಜರವರ ಸುಪುತ್ರಿಯಾಗಿರುವ ಡಾ| ಮಧುಮಾಲ ಟ್ರಾವೆಲ್ ಏಜೆನ್ಸಿ ಉದ್ಯೋಗಿ ಶ್ರೀ ಗೋಪಾಲ್‌ರವರ ಧರ್ಮಪತ್ನಿ. ಒಬ್ಬಳೇ ಮಗಳು 10ನೇ ತರಗತಿಯಲ್ಲಿ ಕಲಿಯುತ್ತಿರುವ ಭೂಮಿಕಾ. ಇವರ ಶೈಕ್ಷಣಿಕ ಸಾಧನೆ ಮತ್ತು ಸಮಾಜಕಾರ್ಯ ಚಟುವಟಿಕೆಗಳಿಗೆ ಯುವವಾಹಿನಿಯ ಗೌರವ ಅಭಿನಂದನೆಗಳನ್ನು ಸಲ್ಲಿಸುತ್ತಾ ಮುಂದಿನ ಭವಿಷ್ಯದ ಯಶಸ್ಸಿಗೆ ಶುಭ ಹಾರೈಸುತ್ತದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!