Yuvavahini

MAY 26, 2024 3.47 PM IST

ಯುವವಾಹಿನಿ(ರಿ.) ಶಕ್ತಿನಗರ ಘಟಕ

ಕಿರು ಪ್ರವಾಸ

ಮಂಗಳೂರು: 26-05-2024 ಮುಂಜಾನೆ ಪ್ರಾರ್ಥನೆಯೊಂದಿಗೆ ನಾರಾಯಣ ಗುರು ಸ್ವಾಮಿಗಳಿಗೆ ನಮಿಸಿ, ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡೆದ್ದರು. ಘಟಕದ ಅಧ್ಯಕ್ಷ ಗಣೇಶ್ ಕೆ ಮಹಾಕಾಳಿ, ಉಪಾಧ್ಯಕ್ಷರುಗಳಾದ ತುಕರಾಮ್, ಸುಜಾತಾ ನವೀನ್, ಕಾರ್ಯದರ್ಶಿ ಅಕ್ಷತಾ ಚರಣ್ ಹಾಗೂ ಮಾಜಿ ಅಧ್ಯಕ್ಷರಾದ ಭಾರತಿ ಗಣೇಶ್ ರವರು ಮುಂದಾಳತ್ವ ವಹಿಸಿಕೊಂಡರು.
30 ಜನರೊಂದಿಗೆ ಕ್ಷೇತ್ರ ದರ್ಶನವನ್ನು ಮಾಡಿದೆವು ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಟು, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಉಪಹಾರವನ್ನು ಮುಗಿಸಿ ನಂತರ ಕಡಿಯಾಳಿ ದುರ್ಗಾಪರಮೇಶ್ವರಿ ದೇವಸ್ಥಾನ, ಆನೆಗುಡ್ಡೆ ಗಣಪತಿ ದೇವಸ್ಥಾನ, ಅಯ್ಯಪ್ಪ ಶಿವ ಕ್ಷೇತ್ರ ಆನೆಗುಡ್ಡೆ, ಕುಂಭ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಹಾಗೆ ಕಮಲಶಿಲೆಯಲ್ಲಿ ಅನ್ನಪ್ರಸಾದವನ್ನು ಸ್ವೀಕರಿಸಿ ನಂತರ ಮುರುಡೇಶ್ವರಕ್ಕೆ ಹೋದೆವು.

ಅಲ್ಲಿ ತುಂತುರು ಮಳೆ ಹನಿಯ ಸಿಂಚನ ದೊಂದಿಗೆ ದೇವರ ದರ್ಶನ ಮಾಡಿ ಉಳಿದ ಎಲ್ಲಾ ಶಿವಕ್ಷೇತ್ರದ ದರ್ಶನದೊಂದಿಗೆ ಮಳೆಯ ಹನಿಯು ನಮ್ಮನ್ನು ಎಲ್ಲಾ ದೇವಾಲಯಗಳನ್ನು ನೋಡಿದ ನಮ್ಮನ್ನು ಪುನೀತರನ್ನಾಗಿ ಮಾಡಿತು. ಬಸ್ಸಿನಲ್ಲಿ ಅಂತ್ಯಾಕ್ಷರಿ, ಕ್ವಿಜ್ ಹಾಗೂ ಕಾರ್ಯಕ್ರಮಗಳನ್ನು ಇಟ್ಟು ವಿಜೇತರಿಗೆ ಬಹುಮಾನ ವಿತರಿಸಲಾಯೀತು. ಕಾಲ ಕ್ಷೇಪಗಳನ್ನು ಮಾಡುತ್ತಾ, ತಿಂಡಿ ತಿನಿಸುಗಳನ್ನು ತಿನ್ನುತ್ತಾ ತುಂಬಾ ಆನಂದಮಯವಾಗಿ ದಿನವನ್ನು ಕಳೆದೆವು. ದಾರಿಮಧ್ಯೆ ಹೋಟೆಲಿನಲ್ಲಿ ಊಟೊಪಚಾರವನ್ನು ಮುಗಿಸಿ ಎಲ್ಲರೂ ತಮ್ಮ ತಮ್ಮ ಮನೆಗೆ ಖುಷಿಯಿಂದ ಹೊರಟರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!