Yuvavahini

JUN 05, 2024 2.47 PM IST

ಯುವವಾಹಿನಿ(ರಿ.) ಕೊಲ್ಯ ಘಟಕ

ವಿಶ್ವ ಪರಿಸರ ದಿನಾಚರಣೆ

ಕೊಲ್ಯ: ಈ ಭೂಮಿ ಮೇಲೆ ಪ್ರಕೃತಿ ನಮಗೆ ತಾಯಿ ಇದ್ದಂತೆ, ನಮ್ಮ ಮನೆಯಲ್ಲಿ ನಮ್ಮ ಅಮ್ಮನನ್ನು ಆರೈಕೆ ಮಾಡುವಂತೆ ನಾವು ಗಿಡ ಮರಗಳನ್ನು ಉಳಿಸಿ ಬೆಳೆಸಿ, ಪ್ರಕೃತಿಯಲ್ಲಿ ದೇವರನ್ನು ಕಾಣಬೇಕು, ಪರಿಸರವನ್ನು ಪ್ರೀತಿಯಿಂದ ಆರೈಕೆ ಮಾಡಿದರೆ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ನೋಡಲು ಸಾಧ್ಯ ಎಂದು ಪರಿಸರ ಪ್ರೇಮಿ, ವೃಕ್ಷ ತಪಸ್ವಿ ಮಾಧವ ಉಳ್ಳಾಲ್ ಅಭಿಪ್ರಾಯಪಟ್ಟರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಪರಿಸರ ಸಂರಕ್ಷಣೆಯಲ್ಲಿ ನಾಗರೀಕರ ಕರ್ತವ್ಯದ ಕುರಿತು, ಕಳೆದ 39 ವರುಷಗಳಿಂದ ಯಾವುದೇ ಫಲಾಪೇಕ್ಷೆಯನ್ನು ಬಯಸದೆ ಗಿಡಮರಗಳನ್ನು ನೆಟ್ಟು ಪೋಷಿಸುತ್ತಿರುವ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ರವರು ಮಾತನಾಡಿ, ಜಾಗತಿಕವಾಗಿ ದಿನೇ ದಿನೇ ಏರುತ್ತಿರುವ ತಾಪಮಾನದಿಂದ ಜೀವಸಂಕುಲಗಳ ರಕ್ಷಣೆಗಾಗಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಗಿಡಮರಗಳನ್ನು ಬೆಳೆಸಬೇಕು, ಅವುಗಳನ್ನು ಬೆಳೆಸುವುದರ ಜೊತೆಗೆ ಪಾಲನೆ ಪೋಷಣೆಯ ಜವಾಬ್ದಾರಿಯನ್ನೂ ವಹಿಸಬೇಕೆನ್ನುವ ಅಮೂಲ್ಯವಾದ ಸಂದೇಶವನ್ನು ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು, ಹೂವಿನ ಗಿಡಗಳನ್ನು ಉಚಿತವಾಗಿ ಘಟಕದ ಸದಸ್ಯರಿಗೆ ವಿತರಿಸಿದರು.

ಯುವವಾಹಿನಿ(ರಿ.) ಕೊಲ್ಯ ಘಟಕದ ಅಧ್ಯಕ್ಷರಾದ ಲತೀಶ್ ಎಂ. ಸಂಕೋಳಿಗೆಯವರು ಘಟಕದ ಪರವಾಗಿ ಪರಿಸರವಾದಿ ಮಾಧವ ಉಳ್ಳಾಲ್ ರವರನ್ನು ಗೌರವಪೂರ್ವಕವಾಗಿ ಅಭಿನಂದಿಸಿದರು. ಘಟಕದ ಸದಸ್ಯರು ತಾವು ಪಡೆದಿರುವ ಗಿಡಗಳನ್ನು ಜತನದಿಂದ ಪೋಷಣೆ ಮಾಡಿಕೊಂಡು ಉತ್ತಮ ಫಲ ಬೆಳೆಸಿ, ಆ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತಮ್ಮ ಕಿರು ಕೊಡುಗೆಯನ್ನು ಸಲ್ಲಿಸಬೇಕೆಂದು ವಿನಂತಿಸಿದರು.

ಘಟಕದ ಸ್ಥಾಪಕ ಅಧ್ಯಕ್ಷರು ಶ್ರೀ ಸುರೇಶ್ ಬಿಲ್ಲವ, ಪ್ರಥಮ ಉಪಾಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುಂದರ್ ಸುವರ್ಣ, ಕೋಶಾಧಿಕಾರಿ ಶ್ರೀಮತಿ ವಿನುತಾ ಪಾಂಡಿಹಿತ್ಲು, ಮಾಜಿ ಅಧ್ಯಕ್ಷರುಗಳಾದ ಶ್ರೀ ಆನಂದ್ ಮಲಯಾಳಕೋಡಿ, ಶ್ರೀ ಮೋಹನ್ ಮಾಡೂರು ಮತ್ತು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಯುವವಾಹಿನಿ(ರಿ.) ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆ ಹಾಗೂ ಪ್ರಸ್ತುತ ದಿನಗಳಲ್ಲಿ ಅದರ ಮಹತ್ವದ ಕುರಿತು ಅರ್ಥಪೂರ್ಣ ಮಾಹಿತಿಯನ್ನು ನೀಡಿ ಪ್ರಸ್ತಾವನೆಗೈದರು. ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಕುಂಪಲ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!