Yuvavahini

JUN 09, 2024 3.01 PM IST

ಯುವವಾಹಿನಿ(ರಿ.) ಮಾಣಿ ಘಟಕ

ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ, ಪ್ರತಿದಿನವು ಪರಿಸರವನ್ನು ಪೋಷಿಸುವಂತಾಗಬೇಕು: ಪ್ರಫುಲ್ ಶೆಟ್ಟಿ

ಮಾಣಿ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ, ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು. ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ, ಗಾಳಿ, ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು.

ಅವರು ದಿನಾಂಕ 09-06-2024ರ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಾಜೆ ಇಲ್ಲಿ ಯುವವಾಹಿನಿ(ರಿ.) ಮಾಣಿ ಘಟಕ ಆತಿಥ್ಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಬಂಟ್ವಾಳ ವಲಯ, ಮಂಗಳೂರು ವಿಭಾಗ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಹಸಿರು ವನ – ಸಂತೃಪ್ತ ಮನ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮೋನಪ್ಪ ಸಾಲ್ಯಾನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಗೌರವ ಸಲಹೆಗಾರರಾದ ನಾರಾಯಣ ಸಾಲ್ಯನ್ ರವರು ಅತಿಥಿಗಳಾಗಿ ಭಾಗವಹಿಸಿ ಪರಿಸರವನ್ನು ಉಳಿಸಿ, ಬೆಳೆಸುವಂತ ಕರ್ತವ್ಯ ನಮ್ಮ ಮೇಲಿದೆ, ಎಲ್ಲರೂ ಒಟ್ಟುಗೂಡಿ ಪರಿಸರವನ್ನು ಸಂರಕ್ಷಿಸುವ ಎಂದು ಹೇಳಿದರು. ತದನಂತರ ಶಾಲೆಯ ಒಂದನೇ ತರಗತಿಯಿಂದ ಏಳನೆ ತರಗತಿಯವರೆಗಿನ ಮಕ್ಕಳಿಗೆ ಉಚಿತವಾಗಿ ಘಟಕದ ವತಿಯಿಂದ ಪುಸ್ತಕ ವಿತರಿಸಲಾಯಿತು ಹಾಗೂ ಮಕ್ಕಳಿಗೆ ಮತ್ತು ಮಕ್ಕಳ ಪೋಷಕರಿಗೆ ಗಿಡ ನೀಡಲಾಯಿತು. ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವುರವರು ಕಾರ್ಯಕ್ರಮಕ್ಕೆ ಸಹಕರಿಸಿದ ಶಾಲಾಭಿವೃದ್ಧಿ ಸಮಿತಿಗೆ, ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ರವಿರಾಜ್ ಬಿ, ಪೆರಾಜೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕುಶಾಲಪ್ಪ ಎಂ ಪೆರಾಜೆ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಸತೀಶ್ ಬಾಬಣಕಟ್ಟೆ ಉಪಸ್ಥಿತರಿದ್ದರು.

ಅತಿಥಿಗಳ ಮುಖೇನ ಶಾಲಾ ವಠಾರದಲ್ಲಿ ಗಿಡವನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕಿಯರು, ಮಕ್ಕಳ ಪೋಷಕರು, ಘಟಕದ ಮಾಜಿ ಅಧ್ಯಕ್ಷರುಗಳು, ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.

ಘಟಕದ ಸದಸ್ಯೆಯಾದ ಪ್ರಜ್ಞಾ ಎಂ ಪ್ರಾರ್ಥನೆಗೈದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಯಶೋಧರವರು ಸ್ವಾಗತಿಸಿದರು, ಘಟಕದ ಕಾರ್ಯದರ್ಶಿಯಾದ ಶಾಲಿನಿ ಜಗದೀಶ್ ರವರು ವಂದಿಸಿದರು, ಮಾಜಿ ಕಾರ್ಯದರ್ಶಿಯಾದ ಸಚಿನ್ ಪೆರಾಜೆರವರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!