Yuvavahini

JUL 31, 2016 5.56 AM IST

ಯುವವಾಹಿನಿ ಗೌರವ ಅಭಿನಂದನೆ- 2016

ಭೌತಶಾಸ್ತ್ರ ವಿಜ್ಞಾನಿ ಡಾ| ಪ್ರವೀಣ್ ಎಸ್.ಡಿ.

ಅವಿಷ್ಕಾರಗಳ ಹಿಂದೆ ಹೋದ ಎಲ್ಲರೂ ಯಶಸ್ವಿ ವಿಜ್ಞಾನಿಗಳಾಗಲು ಅಸಾಧ್ಯ. ಇದಕ್ಕೆ ಇತ್ಯಾತ್ಮಕ ಮನೋಭಾವ, ಸಂಶೋಧನಾ ಪ್ರವೃತ್ತಿ, ಕಾರ್ಯ ಸಾಧನೆಯ ಛಲ, ಅಸಾಧಾರಣ ಮನೋಬಲ ಇವೆಲ್ಲಕ್ಕೂ ಮಿಗಿಲಾಗಿ ಕಠಿಣ ಪರಿಶ್ರಮ ಮನೋದೃಷ್ಟಿ ಅತಿ ಮುಖ್ಯ. ಇವೆಲ್ಲ ಗುಣಗಳನ್ನು ಎಳವೆಯಿಂದಲೇ ಮೈಗೂಡಿಸಿಕೊಂಡು ತನ್ನ ಬುದ್ಧಿಮತ್ತೆಯಿಂದ ಸಂಶೋಧನಾ ಕ್ಷೇತ್ರದ ಭೌತಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಗಳಿಸಿದ ಡಾ| ಪ್ರವೀಣ ಎಸ್.ಡಿ.ಯವರು ಎಲ್ಲರ ಗಮನ ಸೆಳೆದಿದ್ದಾರೆ.

ಪ್ರಸ್ತುತ ಸುಳ್ಯದ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತರು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿಜ್ಞಾನ ಉಪನ್ಯಾಸಕರಾಗಿ ದುಡಿದಿರುತ್ತಾರೆ. 2004 ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಎಂ.ಎಸ್‌ಸಿ ಸ್ನಾತಕೋತ್ತರ ಪದವಿ ಗಳಿಸಿದ ಇವರು Nuclear Physics ನಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಂದ ಪ್ರಶಸ್ತಿ ಗಳಿಸಿದ ಶ್ರೇಷ್ಠ ಸಾಧಕರಾಗಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿಭಾಗಕ್ಕೆ ಇವರು ಮಂಡಿಸಿದ ಡೋಪೆಂಟ್ ಇಂಡ್ಯೂಸ್‌ಡ್ ಮೈಕ್ರೋಸ್ಟ್ರಕ್ಚರಲ್ ಸ್ಟಡಿ ಆಫ್ ಪಾಲಿಮರ್‍ಸ್ ಎಂಬ ಮಹಾ ಪ್ರಬಂಧಕ್ಕೆ ವಿಶ್ವ ವಿದ್ಯಾನಿಲಯ ಪಿ.ಹೆಚ್‌ಡಿ ಪದವಿ ನೀಡಿ ಗೌರವಿಸಿದೆ (2015). ತನ್ನ ಸಂಶೋಧನಾ ಅವಧಿಯಲ್ಲಿ ದೇಶದ ಪ್ರತಿಷ್ಠಿತ ಬಾಬಾ ಅಟೋಮಿಕ್ ರೀಸರ್ಚ್ ಸೆಂಟರ್ (BARC), ಮುಂಬೈ, ಮೈಸೂರು, ಧಾರವಾಡ ಹಾಗೂ ಕೊಚ್ಚಿನ್ ವಿಶ್ವ ವಿದ್ಯಾಲಯಗಳ ಪ್ರಯೋಗ ಶಾಲೆಗಳಲ್ಲಿ ತನ್ನ ಸಂಶೋಧನೆಗಳನ್ನು ನಡೆಸಿರುತ್ತಾರೆ. ಇವರ ಹಲವಾರು ಸಂಶೋಧನಾ ಲೇಖನಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ನಿಯತ ಕಾಲಿಕಗಳಲ್ಲಿ ಪ್ರಕಟವಾಗಿರುತ್ತದೆ.

ಕೃಷಿಕ ಶ್ರೀ ಎಲ್ಲಣ್ಣ ಪೂಜಾರಿ. ಶ್ರೀಮತಿ ಯಶೋಧ ದಂಪತಿಗಳ ಸುಪುತ್ರರಾದ ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸರ್ವೆ ಭಕ್ತಕೋಡಿಯಲ್ಲಿ ಮುಗಿಸಿ ಪದವಿ ಶಿಕ್ಷಣವನ್ನು ವಿಜ್ಞಾನದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಪಡೆದಿರುತ್ತಾರೆ.

ತನ್ನ ಸಕಾರಾತ್ಮಕ, ಸಂಶೋಧನಾ ಪ್ರವೃತ್ತಿಯಿಂದ ಶ್ರೇಷ್ಠ ಸಾಧನೆಗೈದ ಡಾ| ಪ್ರವೀಣ್ ಎಸ್.ಡಿ ಯವರು ಬಿಲ್ಲವ ಸಮುದಾಯದ ಹೆಮ್ಮೆಯ ಸಾಧಕ. ಅವರಿಗೆ ಯುವವಾಹಿನಿಯ ಹೃತ್ಪೂರ್ವಕ ಅಭಿನಂದನೆಗಳು.

One thought on “ಭೌತಶಾಸ್ತ್ರ ವಿಜ್ಞಾನಿ ಡಾ| ಪ್ರವೀಣ್ ಎಸ್.ಡಿ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!