Yuvavahini

JUL 31, 2016 6.05 AM IST

ಯುವವಾಹಿನಿ ಗೌರವ ಅಭಿನಂದನೆ- 2016

ಡಾ| ಪ್ರವೀಣ್ ಬಿ. ಕುದ್ಯಾಡಿಯವರು

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದ ಭಿಮಕಜಿರಿ ಶ್ರೀ ಚಂದಯ್ಯ ಪೂಜಾರಿ-ಇಂದಿರಾ ದಂಪತಿಗಳ ಸುಪುತ್ರ ಡಾ| ಪ್ರವೀಣ್ ಬಿ. ಕುದ್ಯಾಡಿ ಇವರು 2007 ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ| ಪಿ. ಗುರುರಾಜ ಭಟ್ ಸ್ವರ್ಣ ಪದಕ ಸಹಿತ ಪ್ರಥಮ ರ್‍ಯಾಂಕ್‌ನೊಂದಿಗೆ ಎಂ.ಎ. ಪದವಿ (ಇತಿಹಾಸ) ಪಡೆದಿರುತ್ತಾರೆ.

ಇಂತಹ ಸಾಧನೆಯ ಡಾ| ಕುದ್ಯಾಡಿಯವರು ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಶೋಧಕ ಪ್ರವೃತ್ತಿಯಿಂದ ಪ್ರೊ| ಹನುಮನಾಯಕರ ಮಾರ್ಗದರ್ಶನದೊಂದಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಇತಿಹಾಸ (ಕ್ರಿ.ಶ. 10ನೇ ಶತಮಾನದಿಂದ 18ನೇ ಶತಮಾನದವರೆಗೆ) ಅಧ್ಯಯನ ಮಾಡಿದ ಇವರು ಈ ವಿಷಯದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ (Ph.D) ಪದವಿ ಪಡೆದಿರುತ್ತಾರೆ.

2004 ರಲ್ಲಿ B.Ed. ಪದವಿಯನ್ನು ಅತ್ಯುನ್ನತ ಶ್ರೇಣಿಯಲ್ಲಿ ಮುಗಿಸಿ ಇತಿಹಾಸ ಉಪನ್ಯಾಸಕರಾಗಿ ಮಂಗಳೂರಿನ ಖ್ಯಾತ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕುದ್ಯಾಡಿ ಪಿಲ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಣ ಮುಗಿಸಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಪದವಿಗಳಿಸಿ BSS ಶಿಕ್ಷಣ ಮಹಾ ವಿದ್ಯಾಲಯ, ಸಕಲೇಶಪುರ ಹಾಗೂ ಮಂಗಳೂರು ವಿಶ್ವ ವಿದ್ಯಾಲ ಯದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ ಇವರು ಇದೀಗ ವಿದ್ಯಾರ್ಥಿ ಮಾರ್ಗದರ್ಶಕ ಹಾಗೂ ಓರ್ವ ಆದರ್ಶ ಉಪನ್ಯಾಸಕ.

ಡಾ| ಪ್ರವೀಣ್ ಬಿ. ಕುದ್ಯಾಡಿಯವರು ನಮ್ಮ ಸಮಾಜದ ಇನ್ನೋರ್ವ ಸಾಧಕ. ಅವರಿಗೆ ಅಭಿನಂದನೆಗಳು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!