Yuvavahini

JUN 16, 2024 4.43 PM IST

ಯುವವಾಹಿನಿ(ರಿ.) ಮಂಗಳೂರು ಘಟಕ ಹಾಗೂ ಯುವವಾಹಿನಿ(ರಿ.) ಮಹಿಳಾ ಘಟಕ

ಆರೋಗ್ಯ ಶಿಬಿರ

ಮಂಗಳೂರು: ಭಾನುವಾರ ದಿನಾಂಕ 16-06-2024 ರಂದು ಯುವವಾಹಿನಿ(ರಿ.) ಮಂಗಳೂರು ಘಟಕ, ಯುವವಾಹಿನಿ(ರಿ.) ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ, ಬ್ರಹ್ಮ ಕುಮಾರಿ ಮಂಗಳೂರು, ಹಾಗೂ ಆತ್ಮಶಕ್ತಿ ಸಹಕಾರಿ ಸಂಘ. ಎಲ್ಲರ ಸಂಯೋಜನೆಯೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಸಾಮಾನ್ಯ ವೈದ್ಯಕೀಯ ಶಿಬಿರ, ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಪ್ರಗತಿ ಮಹಿಳಾ ಮಂಡಲದಲ್ಲಿ ನಡೆಯಿತು.

ಬ್ರಹ್ಮ ಕುಮಾರಿ ಜಯಶ್ರೀ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಪ್ರಸ್ತುತ ಸಮಯದಲ್ಲಿ ಆರೋಗ್ಯ ಶಿಬಿರದ ಮಹತ್ವವನ್ನು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘದ ಅಧ್ಯಕ್ಷರು ಚಿತ್ತರಂಜನ್ ಅಧ್ಯಕ್ಷೀಯ ಭಾಷಣದಲ್ಲಿ ತಮ್ಮ ಸಹಕಾರಿ ಸಂಘವು ಅರ್ಥಿಕ ವ್ಯವಹಾರದ ಬಳಿಕ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಲ್ಲದೆ 68 ನೇ ಉಚಿತ ವೈದ್ಯಕೀಯ ಶಿಬಿರ ಇದಾಗಿದೆ ಎಂದರು.

ನಿಧಿಲ್ಯಾಂಡ್ ಡೆವಲೆಪರ್ಸ್ ಇಂಡಿಯಾದ ಆಡಳಿತ ನಿರ್ದೇಶಕರಾದ ಪ್ರಶಾಂತ ಕುಮಾರ್ ಸನಿಲ್, ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರು ನಾಗೇಶ್ ಅಮೀನ್, ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರು ಶುಭ ರಾಜೇಂದ್ರ, ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷರು ಪುಷ್ಪ.ಕೆ.ಎ , ಯುವವಾಹಿನಿ(ರಿ.) ಮಂಗಳೂರು ಘಟಕದ ಆರೋಗ್ಯ ನಿರ್ದೇಶಕರು ಅರುಣ್ ಕೋಟ್ಯಾನ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಮಾರು 250 ಜನರು ಈ ಶಿಬಿರದ ಪ್ರಯೋಜನ ಪಡಕೊಂಡಿದ್ದು, 100 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಯುವವಾಹಿನಿ(ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಗಿತ್ತು.

ಆತ್ಮಶಕ್ತಿ ಸಹಕಾರಿ ಸಂಘದ ಶಾಖಾಧಿಕಾರಿಗಳಾದ ಶ್ರೀ ಸಚೀನ್ ಸ್ವಾಗತಿಸಿದರು, ಶ್ರೀಮತಿ ಸುಜಾತ ವಂದಿಸಿದರು, ಶ್ರೀಮತಿ ಸ್ವಾತಿ ನಿರೂಪಣೆ ಮಾಡಿದರು, ಶ್ರೀಮತಿ ಆಶಾ ಹಾಗೂ ಶ್ರೀಮತಿ ಸೌಮ್ಯ ಕಾರ್ಯಕ್ರಮ ಸಂಯೋಜನೆ ಮಾಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!