ಕೂಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 21-06-2024 ಶುಕ್ರವಾರದಂದು ಸಂಜೆ 6.00 ಗಂಟೆಗೆ ಸರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಮಮತಾ ಇವರ ಸಂಚಾಲಕತ್ವದಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಕಾರ್ಯಕ್ರಮವನ್ನು ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಶಿಕ್ಷಕರಾಗಿ ವಿಶು ಕುಮಾರ್ ಆಗಮಿಸಿದ್ದರು. ವೇದಿಕೆಯಲ್ಲಿ ಸಹ ಶಿಕ್ಷಕರಾಗಿ ಶ್ರೀಮತಿ ರೇಖಾ ಹಾಗೂ ಘಟಕದ ಸದಸ್ಯರಾದ ಜಗದೀಶ್ ಮತ್ತು ಸಂಚಾಲಕರಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಯೋಗಾಭ್ಯಾಸದಲ್ಲಿ ಸುಮಾರು 20 ಸದಸ್ಯರು ಭಾಗವಹಿಸಿದ್ದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ನಯನ ರಮೇಶ್, ದೀಕ್ಷಿತ್ ಸಿ ಎಸ್, ಕಾರ್ಯದರ್ಶಿ ಶ್ರೀಮತಿ ನಯನ ಕೋಟ್ಯಾನ್, ಜೊತೆ ಕಾರ್ಯದರ್ಶಿ ಶ್ರೀಮತಿ ಕೀರ್ತನಾ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.