Yuvavahini

JUL 31, 2016 6.31 AM IST

ಯುವವಾಹಿನಿ ಗೌರವ ಅಭಿನಂದನೆ- 2016

ಡಾ| ಶಶಿಧರ ಎಂ. ಕೋಟ್ಯಾನ್

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ. NITKಯಲ್ಲಿ ಇಲೆಕ್ಟ್ರಾನಿಕ್ ಹಾಗೂ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ-ಬಿಟ್ಸ್ ಪಿಲಾನಿ (ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ತಂತ್ರಜ್ಞಾನ ತಜ್ಞರನ್ನು ರೂಪಿಸುವ ಸುಪ್ರಸಿದ್ಧ ಸಂಸ್ಥೆ)ಯಲ್ಲಿ ಪ್ರೊಫೆಸರ್! ಎಲ್ಲಿಂದ ಎಲ್ಲಿಗೆ ಪಯಣ ಅತ್ಯಾಶ್ಚರ್ಯಕರ, ನಂಬಲಸಾಧ್ಯ. ಆದರೆ ಇದು ನಿಜ. ಮೈನವಿರೇಳಿಸುವ ಸಾಧನೆ!!

ಕನ್ನಡ ಮಾಧ್ಯಮದಲ್ಲಿ ಕಲಿತವರು ಹಿಂದೆ ಬೀಳುತ್ತಾರೆ ಎಂಬ ಹೆಚ್ಚಿನ ಜನರ ಅಭಿಪ್ರಾಯವನ್ನು ಸಂಪೂರ್ಣ ನಿರಾಧಾರ ಎಂದು ನಿರೂಪಿಸಿದ ಜ್ವಲಂತ ನಿದರ್ಶನ ಡಾ| ಶಶಿಧರ ಎಂ.ಕೋಟ್ಯಾನ್. ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಂಕದಕಟ್ಟೆ ನಿರಂಜನ ಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಪಡೆದು ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಯು.ಸಿ ಮುಗಿಸಿ ನಂತರ ನಂಬಲಸಾಧ್ಯವಾದ NITKಯಲ್ಲಿ ಇಂಜಿನಿಯರಿಂಗ್ ಸೀಟ್ ಗಳಿಸಿ BE ಮತ್ತು Power energy system  ವಿಷಯದಲ್ಲಿ M.Tech ಸ್ನಾತಕೋತ್ತರ ಪದವಿ ಪಡೆದುದು ಮಾತ್ರವಲ್ಲ ಎಲ್ಲ ಹಂತಗಳಲ್ಲಿ ವಿಶೇಷ ದರ್ಜೆಯಲ್ಲಿ ಉತ್ತೀರ್ಣರಾಗಿ ಇತಿಹಾಸ ನಿರ್ಮಿಸಿದ್ದಾರೆ. ಇದೂ ಸಾಲದೆಂಬಂತೆ M.Tech ನಲ್ಲಿ ಚಿನ್ನದ ಪದಕ ಗಳಿಸಿದ ಕೀರ್ತಿ ಇವರದ್ದು.

ನಮ್ಮ ಸಮುದಾಯದ ಹೆಮ್ಮೆಯ ಕುವರ, ಮೈನವಿರೇಳಿಸುವ ಸಾಧನೆ ಮಾಡಿದ ಸಾಧಕ, ವಿದ್ಯಾರ್ಥಿಗಳ ತಂತ್ರಜ್ಞಾನಿಗಳ ಮಾರ್ಗದರ್ಶಕ ಮುಂದಿನ ದಿನಗಳಲ್ಲಿ ವೈಜ್ಞಾನಿಕ ಅವಿಷ್ಕಾರಗಳ ಮಾರ್ಗದರ್ಶಕರಾಗಿ ಹಲವು ಡಾಕ್ಟರೇಟ್ ವಿದ್ಯಾರ್ಥಿಗಳ ಆಶಾಕಿರಣ ಡಾ| ಕೋಟ್ಯಾನ್ ಆಗಲಿ. ಅವರಿಗೆ ನಮ್ಮ Grand salute ಮತ್ತು All the best   ಎಂದು ಹಾರೈಸುತ್ತಾ ಯುವವಾಹಿನಿಯು ಗೌರವ ಅಭಿನಂದನೆಗಳನ್ನು ಸಲ್ಲಿಸುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!